ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅದೇಶ ಹೊರಡಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆ ಸಹಾಯಕ ಅಭಿಯಂತರರಾದ ಸಂತೋಷ್, ಚಂದನ ಬಿ.ಎಸ್ ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕ (ಗುತ್ತಿಗೆ ಸಿಬ್ಬಂದಿ) ಬಾಬು ಎಂಬುವರೆ ಕರ್ತವ್ಯ ಲೋಪವೆಸಗಿದವರು.
ಈ ವಲಯದ ವಿವಿಧ ವಾರ್ಡ್ ಗಳಲ್ಲಿ ಸಮಸ್ಯೆಗಳು ಮತ್ತು ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ 1ನೇ ಹಾಗೂ 2ನೇ ಜುಲೈ 2025 ರಂದು ನಡೆದ ಸಭೆಯಲ್ಲಿ ನೀಡಿದ ಮಾರ್ಗದರ್ಶನದಂತೆ ಹಾಗೂ 14ನೇ ಜುಲೈ 2025 ರಂದು ಹೊರಡಿಸಿರುವ ಸಭಾ ನಡವಳಿಯಂತೆ ತಮ್ಮ ವಾರ್ಡ್ ವ್ಯಾಪ್ತಿಯ ದೂರುಗಳನ್ನು ಸಹಾಯ 2.0 ತಂತ್ರಾಂಶ (Sahaaya 2.0 App) ದಲ್ಲಿ ಅಪ್ಲೋಡ್ ಮಾಡಿ ನಂತರ ದೂರುಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿತ್ತು.
ಇಂದು ಮುಖ್ಯ ಆಯುಕ್ತರು ವಾರ್ಡ್-102 ವೃಷಭಾವತಿನಗರ, ಮಹಾಲಕ್ಷ್ಮೀಪುರ ವಿಭಾಗದಲ್ಲಿ ಬೆಳಗ್ಗೆ ನಡಿಗೆ ಮೂಲಕ ತಪಾಸಣೆ ಕೈಗೊಂಡ ಸಂದರ್ಭದಲ್ಲಿ ರಸ್ತೆಯಲ್ಲಿ ಇರುವ ಗುಂಡಿಗಳು, ಪಾದಚಾರಿ ಮಾರ್ಗದ ಅಂಚಿನಲ್ಲಿ ತ್ಯಾಜ್ಯ, ಪಾದಚಾರಿ ಮಾರ್ಗದ ಮೇಲೆ ಮನೆ ಕಟ್ಟಡದ ಭಗ್ನಾವಶೇಷಗಳನ್ನು ಸುರಿದಿರುವುದು ಮತ್ತು ರಸ್ತೆಯ ಬದಿಯಲ್ಲಿ ಘನತ್ಯಾಜ್ಯ, ಒಳಚರಂಡಿ ಸ್ವಚ್ಚಗೊಳಿಸಿಲ್ಲದಿರುವುದು. ಅಲ್ಲದೇ ದೂರುಗಳ ವಿಲೇವಾರಿ ಮಾಡಲು ಯಾವುದೇ ರೀತಿಯ ಕ್ರಮವಹಿಸಿಲ್ಲ ಮತ್ತು ಸಾರ್ವಜನಿಕರು ಸಹ ಈ ಬಗ್ಗೆ ಬಹಳಷ್ಟು ದೂರುಗಳನ್ನು ಹೇಳಿಕೊಂಡಿದ್ದರು.
ಈ ಸಂಬಂಧ ಈಗಾಗಲೇ 14ನೇ ಜುಲೈ 2025 ರಂದು ಹೊರಡಿಸಿರುವ ಸಭಾ ನಡವಳಿಯಲ್ಲಿ ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಿ ಪರಿಹರಿಸಲು ಕ್ರಮವಹಿಸುವುದು ಇಲ್ಲದಿದ್ದಲ್ಲಿ ಸಭಾ ನಡವಳಿಯನ್ನೇ ಕಾರಣಕೇಳಿ ಪತ್ರವೆಂಬುದಾಗಿ ಭಾವಿಸಲು ಸೂಚಿಸಿ ಸಹಾಯ 2.0 ತಂತ್ರಾಂಶದಲ್ಲಿ ದೂರುಗಳ ಕುರಿತು ಅಪ್ಲೋಡ್ ಮಾಡಲು ತಿಳಿಸಿದ್ದರೂ ನೌಕರರು ಸಹ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ.
ಹೀಗಾಘಿ ಈ ನೌಕರರು ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ತೋರಿಸಿರುವುದರಿಂದ ಹಾಗೂ ಇವರ ಸೇವೆಯು ತೃಪ್ತಿಕರವಾಗಿರದೇ ಇರುವುದರಿಂದ ಸಾರ್ವಜನಿಕರ ಮತ್ತು ಆಡಳಿತ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಾರ್ಡ್-102 ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
Related

You Might Also Like
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...