NEWSನಮ್ಮರಾಜ್ಯಬೆಂಗಳೂರುರಾಜಕೀಯ

ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ

ಸಚಿವರ ಜತೆಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್‌.ಕೆ.ಆತೀಕ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 329ನೇ ಕಚೇರಿಯನ್ನು ನೀಡಲಾಗಿದ್ದು, ಸರ್ಕಾರದ ಆಡಳಿತಾತ್ಮಕ ಕಾರ್ಯಾಚರಣೆ ಸುಗಮಗೊಳಿಸುವ ಉದ್ದೇಶದಿಂದ ಈ ಹಂಚಿಕೆ ಮಾಡಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೂತನವಾಗಿ ನೇಮಕಗೊಂಡ ಉಪಮುಖ್ಯಮಂತ್ರಿ ಸೇರಿ 13 ಸಂಪುಟ ದರ್ಜೆ ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ನೂತನ ಉಪ ಮುಖ್ಯಮಂತ್ರಿಗಳು ಹಾಗೂ ಸಂಪುಟ ದರ್ಜೆ ಸಚಿವರಾಗಿ ಇದೇ ಜೂನ್‌ 3ರಂದು ಪ್ರಮಾಣ ವಚನ ಸ್ವೀಕರಿಸಿರುವ 13 ಮಂದಿಗೂ ವಿಧಾನಸೌಧ, ವಿಕಾಸಸೌಧ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೊಠಡಿ ಹಂಚಿಕೆ ಮಾಡಿ ಆದೇಶಿಸಲಾಗಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ನಾಲ್ಕು ಕೊಠಡಿಗಳು (335, 336, 337, 337A) ನೀಡಲಾಗಿದ್ದು, ಹಿಂದೆ ಡಿಸಿಎಂ ಆಗಿದ್ದಾಗ ಡಿ.ಕೆ.ಶಿವಕುಮಾರ್ ಬಳಸುತ್ತಿದ್ದ ಕಚೇರಿಯನ್ನೂ ಅವರಿಗೆ ನೀಡಲಾಗಿದೆ. ಈ ಕಚೇರಿಯನ್ನು ಹಿಂದೆಯೇ ಉನ್ನತ ಮಟ್ಟದಲ್ಲಿ ನವೀಕರಿಸಲಾಗಿತ್ತು.

ಉಪಮುಖ್ಯಮಂತ್ರಿ, ಕಂದಾಯ ಮತ್ತು ಕ್ರೀಡಾ ಇಲಾಖೆಯ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 327, 327A. ಆಹಾರ ಮತ್ತು ನಾಗರೀಕ ಸರಬರಾಜು ಗ್ರಾಹ ವ್ಯವಹಾರಗಳ ಸಚಿವರ ಕೆ.ಎಚ್‌.ಮುನಿಯಪ್ಪ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 340ಎ-341-341ಎ ಕಚೇರಿಗಳನ್ನು ನೀಡಲಾಗಿದೆ.

ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 317-317ಎ ಮತ್ತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ 314, 314A ಹಾಗೂ ಸಾರಿಗೆ ಸಚಿವ ಭೈರತಿ ಸುರೇಶ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 316-361ಎ ಕಚೇರಿಗಳನ್ನು ನೀಡಲಾಗಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಜೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 344, 344ಎ. ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ವಿಕಾಸಸೌಧದಲ್ಲಿರುವ 444-445 ಕಚೇರಿಗಳನ್ನು ನೀಡಲಾಗಿದೆ.

ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ವಿಕಾಸಸೌಧ 244-245ನೇ ಕಚೇರಿಗಳನ್ನು ಹಾಗೂ ಗೃಹ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ವಿಕಾಸಸೌಧದ 242-243ನೇ ಕಚೇರಿಗಳನ್ನು ನೀಡಲಾಗಿದೆ.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 315-315ಎ ಕಚೇರಿಗಳನ್ನು ನೀಡಿದ್ದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ್‌ ಖಂಡ್ರೆ ಅವರಿಗೆ ವಿಕಾಸಸೌಧ 36-37ನೇ ಕಚೇರಿಗಳನ್ನು ನೀಡಲಾಗಿದೆ.

ಹಾಗೆಯೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಅವರಿಗೆ ವಿಕಾಸೌಧದ 344-345ನೇ ಕಚೇರಿಗಳನ್ನು ಕೊಡಲಾಗಿದೆ.

ಇನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್‌.ಕೆ.ಆತೀಕ್‌ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 329ನೇ ಕಚೇರಿಯನ್ನು ನೀಡಲಾಗಿದೆ. ಸರ್ಕಾರದ ಆಡಳಿತಾತ್ಮಕ ಕಾರ್ಯಾಚರಣೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. Ministers PA List

Megha
the authorMegha

Leave a Reply

error: Content is protected !!
Latest news
ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ...