NEWSನಮ್ಮಜಿಲ್ಲೆ

ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿದ SBI ಮಹಿಳಾ ಮ್ಯಾನೇಜರ್ ವಿರುದ್ಧ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ- ಎತ್ತಂಗಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್‌ಬಿಐ ಕಚೇರಿಯಲ್ಲಿ ನಡೆದಿದ್ದರಿಂದ ವಿರುದ್ಧ ಕನ್ನಡ ಪರ ಸಂಘಟನೆಗಳು ಇಂದು ಪ್ರತಿಭಟನೆ ಮಾಡಿದ ಕೂಡಲೇ ಮ್ಯಾನೇಜರ್‌ ಎತ್ತಂಗಡಿಯಾಗಿದ್ದಾರೆ.

ಮ್ಯಾನೇಜರ್ ಕನ್ನಡ ಮಾತಾಡಲ್ಲ. ಹಿಂದಿ ಮಾತಾಡ್ತೀನಿ ಎಂದು ಹೇಳುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹೀಗಾಗಿ ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಆತ ದರ್ಪದಿಂದ ಮಾತಾಡಿರೋ ವಿಡಿಯೋ ವೈರಲ್ ಆಗುತ್ತಿದ್ದಂತೆ, ಕನ್ನಡಿಗರು ಆಕ್ರೋಶ ಹೊರ ಹಾಕುತ್ತಿದ್ದಂತೆ ಪ್ರತಿಭಟನೆಯ ಭೀತಿಯಿಂದ ಬ್ಯಾಂಕ್ ಮ್ಯಾನೇಜರ್ ಕ್ಷಮೆ ಕೇಳಿದ್ದರು.

ಇದೀಗ ಕನ್ನಡ ಮಾತನಾಡಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ನಡೆ ಬಗ್ಗೆ ಸಿಎಂ ಮುಖ್ಯಮಂತ್ರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳು ಜನರ ಜತೆ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು. ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವುದು ತೀವ್ರವಾಗಿ ಖಂಡನೀಯ.

ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು ಪ್ರಶಂಸಿಸುತ್ತೇವೆ. ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು. ಗ್ರಾಹಕರ ಜತೆ ಸ್ಥಳೀಯ ಭಾಷೆಯಲ್ಲಿ ಮಾತನಾಡುವ ಪ್ರಯತ್ನ ಮಾಡಬೇಕು.

ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿ ಕಡ್ಡಾಯಗೊಳಿಸಬೇಕು. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದರ್ಥ ಎಂದು ಹೇಳುತ್ತಾ ಕೇಂದ್ರದ ಹಣಕಾಸು ಇಲಾಖೆಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇನ್ನು ಕನ್ನಡಪರ ಸಂಘಟನೆಗಳು SBI ಹೆಡ್ ಆಫೀಸ್ ಜನರಲ್ ಮ್ಯಾನೇಜರ್ ಸುಶೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಅವರ ಮನವಿಯನ್ನು ಸ್ವೀಕರಿಸಿದ ಅವರು ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ