NEWSನಮ್ಮರಾಜ್ಯಶಿಕ್ಷಣ-

ಸರ್ಕಾರಿ ಕಾಲೇಜುಗಳಲ್ಲಿ ‘ಕ್ಯಾಂಪಸ್ ಇಂಟರ್ವ್ಯೂ’ ಆಯೋಜಿಸಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಕ್ಯಾಂಪಸ್ ಇಂಟರ್ವ್ಯೂ ಇಂದು ಖಾಸಗಿ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಕೂಡ ಕ್ಯಾಂಪಸ್ ಇಂಟರ್ವ್ಯೂ ನಡೆಸಬೇಕು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ಕ್ಯಾಂಪಸ್‌ ಇಂಟರ್ವ್ಯೂನಲ್ಲಿ ಉದ್ಯೋಗ ಸಿಗುವಂತಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಒತ್ತಾಯಿಸಿದ್ದಾರೆ.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಕಾಲೇಜುಗಳಲ್ಲಿ ಮಾತ್ರ ಯಾಕೆ ಕ್ಯಾಂಪಸ್‌ ಇಂಟರ್ವ್ಯೂ ಆಯೋಜಿಸಲಾಗುತ್ತದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕೆಲಸಕ್ಕೆ ಎಲ್ಲಿ ಹೋಗಬೇಕು, ಈ ತಾರತಮ್ಯ ಯಾಕೆ ಎಂದು ಪ್ರಶ್ನೆ ಮಾಡಿದರು.

ಈ ಸಮಸ್ಯೆಗಳ ಬಗ್ಗೆ ಆಮ್ ಆದ್ಮಿ ಪಾರ್ಟಿ ಧ್ವನಿ ಎತ್ತಿದ್ದು ರಾಜ್ಯಾದ್ಯಂತ ‘ನಮಗೇಕಿಲ್ಲ ಕ್ಯಾಂಪಸ್ ಇಂಟರ್ವ್ಯೂ?’ ಎನ್ನುವ ಅಭಿಯಾನ ನಡೆಸುತ್ತಿದೆ. ಅದರ ಅಂಗವಾಗಿ ಈಗ ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಾರ್ಟಿ ಯುವ ಘಟಕದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ ಮಾತನಾಡಿ, ಈಗಾಗಲೇ ರಾಜ್ಯದ 16 ಜಿಲ್ಲೆಗಳಲ್ಲಿ ಈ ಅಭಿಯಾನ ಯಶಸ್ವಿಯಾಗಿದೆ. ಗ್ರಾಮೀಣ ಮಕ್ಕಳಿಗೂ ಉದ್ಯೋಗದಲ್ಲಿ ಅವಕಾಶ ಸಿಗಬೇಕು ಎಂದರೆ, ಸರ್ಕಾರಿ ಕಾಲೇಜುಗಳಲ್ಲಿ ಪ್ರತಿ ವರ್ಷ ಕ್ಯಾಂಪಸ್ ಇಂಟರ್ವ್ಯೂ ನಡೆಸಬೇಕು. ಸರ್ಕಾರ ಈ ಬಗ್ಗೆ ಎಚ್ಚೆತ್ತು ಸರ್ಕಾರಿ ಕಾಲೇಜುಗಳಲ್ಲಿ ಕೂಡ ಕ್ಯಾಂಪಸ್ ಇಂಟರ್ವ್ಯೂ ನಡೆಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಅಭಿಯಾನ ನಿಲ್ಲುವುದಿಲ್ಲ ಎಂದರು.

ಉತ್ತರ ಕರ್ನಾಟಕದ ಅನೇಕ ಶಾಲಾ-ಕಾಲೇಜುಗಳಲ್ಲಿ ಸರಿಯಾದ ಮೂಲಭೂತ ವ್ಯವಸ್ಥೆ ಇಲ್ಲದಂತಾಗಿದೆ, ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಕೂಡ ಆಮ್ ಆದ್ಮಿ ಪಾರ್ಟಿ ಹೋರಾಟ ಮಾಡುವುದು ಎಂದರು.

ಆಮ್ ಆದ್ಮಿ ಪಾರ್ಟಿಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ, ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ಆನಂದ್ ದೇವಾಡಿಗ, ಜಿಲ್ಲಾ ಮಾಧ್ಯಮ ಉಸ್ತುವಾರಿ ಅರವಿಂದ್ ಮುಚಕಂಡಿ, ಜಿಲ್ಲಾ ಯುವ ಘಟಕ ನಾಯಕರಾದ ಮಂಜುನಾಥ್, ವೀರಭದ್ರಯ್ಯ ಹಾಗೂ ಇತರ ಮುಖಂಡರು ಇದ್ದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ