NEWSಕ್ರೀಡೆ

ಕ್ರೀಡೆಗೆ ನಿರಂತರ ಪ್ರೋತ್ಸಾಹ ನಮ್ಮ ಸರ್ಕಾರ ಕೊಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಪುಟಾಣಿ ಕ್ರೀಡಾಳುಗಳಿಗೆ ಶುಭ ಹಾರೈಸಿ ಮಾತನಾಡಿದರು.

ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ ಎಂದು ಕರೆ ನೀಡಿದರು.

ಇನ್ನು ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ. ಇದನ್ನು ಮೊದಲು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದ್ದೇವೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕೆ ಬೇಕಾದ ಎಲ್ಲ ನೆರವನ್ನು ನಾವು ನೀಡಲಿದ್ದೇವೆ ಎಂದರು.

ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಶಾಸಕ ಅರ್ಷದ್ ರಿಜ್ವಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...