NEWSನಮ್ಮರಾಜ್ಯರಾಜಕೀಯ

ನಮ್ಮ ಮೆಟ್ರೋ ಜಟಾಪಟಿ: ಖಾಲಿ ಟ್ರಂಕ್‌ ಸರ್ಕಾರ ಅಂತ ಟ್ರಂಕ್‌ ಹಿಡ್ಕೊಂಡು ಬಂದ ಸಂಸದ ತೇಜಸ್ವಿ ಸೂರ್ಯ ವಶಕ್ಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌.ವಿ. ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ಸಿ.ಕೆ.ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ನಾನು ಪ್ರತಿಭಟನೆ ಮಾಡುತ್ತಿಲ್ಲ. ಖಾಲಿ ಟ್ರಂಕ್‌ ಹಿಡಿದಿದ್ದೇನೆ, ನನ್ನನ್ನು ಯಾರೂ ತಡೆಯಬಾರದು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಾಗ, ನಾನು ಖಾಲಿ ಟ್ರಂಕ್‌ ಹಿಡಿದುಕೊಂಡಿದ್ದೇನೆ. ಸಂಸತ್ತು ಅಧಿವೇಶನ ನಡೆಯುತ್ತಿದ್ದಾಗ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ. ಇನ್ನು ನಾನು ಒಬ್ಬ ವಕೀಲ ತಾವು ಕಾನೂನು ತಿಳಿದುಕೊಂಡು ವಶಕ್ಕೆ ಪಡೆಯಿರಿ ಎಂದು ಪೊಲೀಸರಿಗೆ ಹೇಳಿದರು.

ಇನ್ನು ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು ಟ್ರಂಕ್‌ ಮೇಲಿದ್ದ ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ’ ಎಂದು ಬರೆದಿರುವ ಟ್ರಂಕ್‌ನಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಭಾವಚಿತ್ರಗಳಿದ್ದವು. ಈ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರ ಎಂದು ಇದ್ದ ಪೋಸ್ಟರ್‌ ತೆಗೆದರು.

ಬಿಜೆಪಿಯ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಮಮೂರ್ತಿ ಅವರು, ದರ ಏರಿಕೆಗೆ ತಾತ್ಕಾಲಿಕ ತಡೆ ಆಗಿದೆ. ದರ ಏರಿಕೆ ಕೂಡಲೇ ಕೈ ಬಿಡಬೇಕು. ಈಗಿರುವ ದರವನ್ನೂ ಕಡಿಮೆ ಮಾಡಬೇಕು. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಸಿಟ್ಟು ಹೊರಹಾಕಿದರು.

ಬಿಜೆಪಿ ಪ್ರತಿಭಟನೆ ನಡೆಸುವ ವಿಚಾರ ತಿಳಿದು ಮೊದಲೇ ಸರ್ಕಾರ ಆರ್‌.ವಿ. ಮೆಟ್ರೋ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿತ್ತು. ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಭದ್ರತೆ ನೀಡಿತ್ತು. ನಿಲ್ದಾಣದ ಹೊರಗೆ ಬಿಎಂಆರ್‌ಸಿಎಲ್‌ ಭದ್ರತಾ ವಿಭಾಗದ ಸಿಬ್ಬಂದಿಯೂ ನಿಂತಿದ್ದರು.

ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಗೂಂಡಾಗಳಿಗೇ ಹೆದರದೆ ಹೋರಾಟ ಮಾಡಿ ಬಂದಿದ್ದೇನೆ. ನಮ್ಮದೇ ಏರಿಯಾದಲ್ಲಿ ನೋಟಿಸ್ ಕೊಟ್ಟು ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರತಿಭಟನೆ ನಡೆಸದಂತೆ ಪೊಲೀಸರು ನೀಡಿರುವ ನೋಟಿಸ್ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ನಮ್ಮದೇ ಪ್ರದೇಶದಲ್ಲಿ ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದರು.

ನಾವು ಮೆರವಣಿಗೆ, ಧರಣಿ ಅಥವಾ ಮುಷ್ಕರ ನಡೆಸುತ್ತಿಲ್ಲ, ಬದಲಾಗಿ ಸಾಮಾನ್ಯ ನಾಗರಿಕನಾಗಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದೇನೆ. ಈ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ ಸೂರ್ಯ, ಬೆಂಗಳೂರು ಮೆಟ್ರೋಗೆ ಸರ್ಕಾರ ಬಜೆಟ್ ಬೆಂಬಲ ನೀಡಬೇಕು ಮತ್ತು ಹೊಸ ದರ ನಿಗದಿ ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.

ಬಿಎಂಆರ್​​ಸಿಎಲ್ ಭಾರತದ ಅತಿ ದುಬಾರಿ ಮೆಟ್ರೋ ಆಗಬಾರದು. ಬದಲಿಗೆ ಶುದ್ಧ, ಸುರಕ್ಷಿತ ಮತ್ತು ದಕ್ಷ ಮೆಟ್ರೋ ಆಗಬೇಕು ಎಂದು ಒತ್ತಾಯಿಸಿದರು.

Megha
the authorMegha

Leave a Reply

error: Content is protected !!
Latest news
ಗ್ಯಾಸ್ ಸಿಲಿಂಡ‌ರ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು ಗೊತ್ತ? KSRTC: ಕರ್ತವ್ಯ ಮುಗಿಸಿ ಪ್ರಯಾಣಿಸುವ ಸಂಸ್ಥೆ ಸಿಬ್ಬಂದಿ ಕಡ್ಡಾಯವಾಗಿ ID Card ಪ್ರದರ್ಶಿಸಿ- ಇಂಥ ಚೋರರ ಪತ್ತೆಗೆ ಸಹಕ... ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ KSRTC: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಭಸ್ಮ- ಅದೃಷ್ವಶಾತ್‌ ಕೂದಲೆಳೆ ಅಂತರದಲ್ಲೇ ಪ್ರಯಾಣಿಕರು ಪಾರ... ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ ಏ.6ರಂದು KSRTC ಎಂಡಿ ಜತೆ ಸಾರಿಗೆ ನೌಕರರ ಸಂಘಟನೆಗಳ ಸಭೆ- 2024 ರಿಂದ ವೇತನ ಹೆಚ್ಚಳ ಮಾಡದಿದ್ದರೆ ಹೋರಾಟ ಅನಿವಾರ್ಯ BMTC-KSRTC: ನಾಳೆ EPS ಪಿಂಚಣಿದಾರರ ಕನಿಷ್ಠ ಪಿಂಚಣಿ ₹7,500 ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ... KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ