NEWSನಮ್ಮಜಿಲ್ಲೆರಾಜಕೀಯ

ಅರಸು ಅವರಂತ ಶ್ರೇಷ್ಠ ರಾಜಕಾರಣಿ ನಮ್ಮ ತಾಲೂಕಿನಲ್ಲಿ ಹುಟ್ಟಿದ್ದು ನಮ್ಮೆಲ್ಲರ ಪುಣ್ಯ: ಮಾಜಿ ಶಾಸಕ ಕೆ.ವೆಂಕಟೇಶ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ನಾಡು ಕಂಡ ಶ್ರೇಷ್ಠ ರಾಜಕಾರಣಿ ಇವರು ನಮ್ಮ ತಾಲೂಕಿನವರು ಎಂದು ಹೇಳಲು ಹೆಮ್ಮೆ ಪಡುತ್ತೇನೆ   ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ಬಣ್ಣಿಸಿದರು.

ಬೆಟ್ಟದತುಂಗ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ದೊಡ್ಡಮ್ಮ ತಾಯಿಪೂಜಾ ಮಹೋತ್ಸವ ಹಾಗೂ ನೂತನ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂಧನಾ ಸಮಾರಂಭದಲ್ಲಿ ಮಾತನಾಡಿದರು.

ಅರಸು ಅವರು ಮೂಲತಃ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದತುಂಗ ಗ್ರಾಮದವರಾಗಿದ್ದು, ಹುಣಸೂರು ತಾಲೂಕಿಗೆ ದತ್ತು ಮಗನಾಗಿ ಹೊಗಿ 2 ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತಾಲೂಕಿನ ಕೀರ್ತಿ ಪಥಕೆಯನ್ನು ಎತ್ತಿ ಹಿಡಿದ ಮಹಾನ್ ನಾಯಕ ಎಂದರು.

ನಾನು ಶಾಸಕನಾಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯನವರ ಸಹಕಾರದಿಂದ ಬೆಟ್ಟದತುಂಗದಲ್ಲಿ ಅರಸು ಅವರ ಪುತ್ಥಳಿ ನಿರ್ಮಾಣ ಮಾಡಲಾಗಿತ್ತು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ ಮಾತನಾಡಿ, ಮಾಜಿ ಶಾಸಕ ಕೆ.ವೆಂಕಟೇಶ್ ಅವರು ತಂದಿರುವ ಅನುದಾನವನ್ನು ಪುನಃ ಗುದ್ದಲಿ ಪೂಜೆ ಮಾಡುತ್ತಿರುವ ಶಾಸಕರು ಇದು ನಾನು ತಂದ ಅನುದಾನವೆಂದು ಇಡೀ ತಾಲೂಕಿಗೆ ಹೇಳಿ ಜನತೆಯ ದಿಕ್ಕು ತಪ್ಪಿಸುತ್ತಿದ್ದಾರೆ ನಿಜವಾಗಿಯೂ ಅವರಿಗೆ ತಾಕ್ಕತಿದ್ದರೆ ಅನುಷ್ಠಾನ ಮತ್ತು ಅನುದಾನ ತಂದ ವರ್ಷ ಮತ್ತು ದಿನಾಂಕವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲಿ  ಎಂದರು.

ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು ಮಾತನಾಡಿ 2013 ರಿಂದ 2018 ವರೆವಿಗೆ ಅಭಿವೃದ್ಧಿಯ ಪರ್ವ ವರ್ಷ ಎಂದೇ ಹೇಳಬಹುದು  ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ತಾಲ್ಲೂಕಿಗೆ ಜನತೆಗೆ ಮುಟ್ಟಿಸುವಲ್ಲಿ ನಾವು ವಿಫಲರಾಗಿದ್ದೇವೆ ಆದ್ದರಿಂದಲೇ ನಮಗೆ ಸೋಲುಂಟಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಗ್ರಾ.ಪಂ. ಅಧ್ಯಕ್ಷ ಕರಿಯಯ್ಯ, ಉಪಾಧ್ಯಕ್ಷೆ ಲಕ್ಷ್ಮಿ ತಾ.ಪಂ.ಸದಸ್ಯ ಕುಂಜಪ್ಪ ಕಾರ್ನಾಡ್, ತಾ.ಬೋವಿ ಸಮಾಜದ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಆರ್.ಎಸ್.ವಿಜಯಕುಮಾರ್, ಗಗನ್, ತೆಲುಗಿನಕುಪ್ಪೆ ನಾಗಣ್ಣ, ಭರತ್ ರಾಜೇ ಅರಸ್, ಕರಡಿಪುರ ಕುಮಾರ್, ಕೃಷ್ಣೇಗೌಡ ಸತೀಶ್ ರಾಜೇ ಅರಸ್, ಸಣ್ಣಸ್ವಾಮಿಗೌಡ, ಪ್ರಕಾಶ್ ರಾಜೇ ಅರಸ್, ಜಯರಾಮೇಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...