CrimeNEWSನಮ್ಮಜಿಲ್ಲೆ

ಕಾರು ಕಳ್ಳನ ಬಂಧನ: 7ಲಕ್ಷ ರೂ. ಮೌಲ್ಯದ ಕಾರು ವಶ

ಡಿಸಿಪಿ ಗೀತಾ ಪ್ರಸನ್ನ, ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ನಗರ ಮತ್ತು ನಗರದ ಸುತ್ತಮುತ್ತ ನಿಲ್ಲಿಸಿ ತಮ್ಮ ಕಾರ್ಯಕ್ಕೆ ತೆರಳಿದ ಬಳಿಕ ಕ್ಷಣಾರ್ಧದಲ್ಲೇ ಕಾರುಗಳನ್ನು ಕದಿಯುತ್ತಿದ್ದ ಚೋರನನ್ನು ಲಷ್ಕರ್ ಠಾಣೆ ಪೊಲೀಸರು ಬಂಧಿಸಿ, 7 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪಾಂಡವಪುರ ತಾಲೂಕಿನ ಬನ್ನಘಟ್ಟ ಗ್ರಾಮದ ಸತೀಶ್ (22) ಬಂಧಿತ ಆರೋಪಿ. ಕಳೆದ ಫೆ.28ರಂದು ಸಂಜೆ 6ರ ಸಮಯದಲ್ಲಿ ಗೌತಮ್ ಶೇಖರ್ ಎಂಬುವರು ಬಟ್ಟೆ ಖರೀದಿಸಲು ತಮ್ಮ ಮಾರುತಿ ಸ್ವೀಫ್ಟ್ ಕಾರಿನಲ್ಲಿ ತಮ್ಮ ಮನೆಯವರ ಜತೆ ಮೈಸೂರಿನ ಕರ್ನಾಟಕ ಸಿಲ್ಕ್ಸ್‌ಗೆ ಬಂದಿದ್ದರು.

ಬಟ್ಟೆ ಖರೀದಿ ನಂತರ ಅಲ್ಲಿಂದ ಸುಮಂಗಲಿ ಸಿಲ್ಕ್ಸ್‌ಗೆ ಬಂದು, ಕಾರನ್ನು ಆರ್‌ಆರ್ ಹೋಟೆಲ್ ಮುಂದೆ ನಿಲ್ಲಿಸಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದಾಗ ಕಾರು ನಾಪತ್ತೆಯಾಗಿತ್ತು. ಈ ಸಂಬಂಧ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ಪಾಂಡುವಪುರದ ಮಾದೇಗೌಡನ ಹಳ್ಳಿಯಲ್ಲಿ ಸತೀಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಾರು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಡಿಸಿಪಿ ಗೀತಾ ಪ್ರಸನ್ನ, ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಸುರೇಶ್ ಕುಮಾರ್, ಪಿಎಸ್‌ಐಗಳಾದ ಗೌತಮ್ ಗೌಡ, ಧನಲಕ್ಷ್ಮೀ, ಸಿಬ್ಬಂದಿ ಬೋಪಯ್ಯ, ಮಹದೇವಸ್ವಾಮಿ, ಲೋಕೇಶ್, ಮಂಜುನಾಥ್, ಚಿನ್ನಪ್ಪ, ಪ್ರತೀಪ, ಮಂಜುನಾಥ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?