CrimeNEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟ: ಯುವತಿಯೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ

ವಿಷಯ ಮಾಧ್ಯಮಗಳಿಗೆ ತಿಳಿಯುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಓಡಿ ಹೋದ ಸಚಿವ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ಕೆಲಸ ಕೊಡಿಸುವುದಾಗಿ ಯುವತಿಗೆ ನಂಬಿಸಿ ಲೈಂಕಿಕ ತೃಷೆಗೆ ಬಳಿಸಿಕೊಂಡು ನಂತರ ಕೊಲೆ ಬೆದರಿಕೆ: ಆರೋಪ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟಗೊಂಡಿದ್ದು, ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ಸಿಡಿ ಇದೀಗ ಭಾರಿ ಸದ್ದು ಮಾಡುತ್ತಿದೆ.

ನವದೆಹಲಿಯ ಕರ್ನಾಟಕ ಭವನದಲ್ಲೇ ಮಹಿಳೆಯೊಬ್ಬಳನ್ನು ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿರುವ ಘಟನೆ ಇದೀಗ ಎಲ್ಲೆಡೆ ಸ್ಪೋಟಗೊಂಡಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಉಂಟುಮಾಡಿದೆ.

ಬೆಂಗಳೂರು ಪೊಲೀಸ್ ಆಯುಕ್ತರಿಗೆ ಈ ರಾಸಲೀಲೆ ಸಿಡಿ ಸಲ್ಲಿಕೆಯಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಸಿಡಿಯನ್ನು ಹಸ್ತಾಂತರಿಸಿದ್ದಾರೆ. ಇನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕೇಸು ದಾಖಲಿಸಲು ಮುಂದಾಗಿದ್ದಾರೆ.

ಇದೆ ಅಲ್ಲದೆ ರಮೇಶ್ ಜಾರಕಿಹೊಳಿ ಅವರ ಮತ್ತೊಂದು ವಿಡಿಯೋ ಬಹಿರಂಗವಾಗಿದ್ದು ಅದರಲ್ಲಿ ಬೇರೊಬ್ಬ ಯುವತಿಯೊಂದಿಗೆ ಇರುವುದು ಪತ್ತೆಯಾಗಿದೆ. ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಸಿಡಿ ಆರೋಪ ಮಾಡಿದ್ದಾರೆ.

ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ರಮೇಶ್‌ ಜಾರಕಿಹೊಳಿ ವಿರುದ್ಧ ಈಗ ಕೇಳಿ ಬಂದಿದೆ. ಈ ಸಂಬಂಧ ರಮೇಶ್‌ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಅರವನ್ನು ಆಗ್ರಹಿಸಿದ್ದಾರೆ.

ಮತ್ತೊಬ್ಬ ಮಹಿಳೆಯೊಂದಿಗೂ ರಾಸಲೀಲೆ
ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂಗಳನ್ನು ಚಿತ್ರೀಕರಣ ಮಾಡಲು ಬಯಸಿದ್ದ ಮಹಿಳೆ ಸಹಾಯಕ್ಕೆಂದು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡು ಜಾರಕಿಹೊಳಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾನೆ ಎಂದು ದೂರುದಾರ ದಿನೇಶ್‌ ಕಲ್ಲಹಳಳಿ ನಗರ ಪೊಲೀಸ್ ಆಯುಕ್ತರಿಗೆ ದೂರಿನ ಜೊತೆ ಸಿಡಿಯನ್ನು ನೀಡಿದ್ದಾರೆ.

ಇನ್ನು ಇದಕ್ಕೂ ಮುನ್ನ ನಿಗದಿಯಾಗಿದ್ದ ಅಂದರೆ ನಾಳೆ ಮಧ್ಯಾಹ್ನ 2ಕ್ಕೆ ಸಿಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯ ರಮೇಶ್ ಜಾರಕಿಹೊಳಿ ಬರ್ತಾರ ಎಂಬ ಪ್ರಶ್ನೆ ಇದೀಗ ಎದ್ದಿದೆ. ಸಂಪುಟ ಸಭೆಯಲ್ಲೂ ಸಾಹುಕಾರನ ರಾಸಲೀಲೆ ಚರ್ಚೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಂಪುಟ ಸಚಿವರು ಭಾರಿ ಮುಜುಗರಕ್ಕೊಳಗಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸಂಪುಟ ಸಚಿವರು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ರಾಸಲೀಲೆಗೆ ಇಡಿ ಬಜೆಟ್ ಅಧಿವೇಶನ ಬಲಿಯಾಗುತ್ತ ?
ರಮೇಶ್ ಜಾರಕಿಹೊಳಿ ರಾಸಲೀಲೆಗೆ ಇಡಿ ಬಜೆಟ್ ಅಧಿವೇಶನ ಬಲಿಯಾಗುತ್ತ ಎಂಬ ಪ್ರಶ್ನೆ ಇದೀಗ ಎದ್ದಿದ್ದು ಮಾರ್ಚ್ 4ರಿಂದರಮೇಶ್ ಜಾರಕಿಹೊಳಿ ರಾಸಲೀಲೆಗೆ ಇಡಿ ಬಜೆಟ್ ಅಧಿವೇಶನ ಬಲಿಯಾಗುತ್ತ ಎಂಬ ಪ್ರಶ್ನೆ ಇದೀಗ ಎದ್ದಿದ್ದು, ಮಾರ್ಚ್ 4 ರಿಂದ 31ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೂ ಒಂದು ಅಸ್ತ್ರ ಸಿಕ್ಕಂತಾಗಿದೆ.

ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ವಿದ್ದಾಗ ರಾಜೀನಾಮೆ ನೀಡಿ ಬಿಜೆಪಿಗೆ ಸೇಇಕೊಂಡಿದ್ದರು. ಈಗ ಪ್ರತಿಪಕ್ಷಗಳು ರಾಸಲೀಲೆ ಪ್ರಕರಣ ಇಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳುವ ಪ್ಲಾನ್ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಸಿಡಿ ಪ್ರಕರಣ ದೊಡ್ಡ ಸದ್ದು ಮಾಡಲಿದೆ ಎಂದು ಹೇಳಲಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳುವ ಪ್ಲಾನ್ ಮಾಡಿವೆ ಎನ್ನಲಾಗುತ್ತಿದೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...