NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದ 2ನೇ ದಿನವಾದ ಇಂದು ಕೂಡ ಗದ್ದಲ, ಧರಣಿಯದ್ದೇ ದರಬಾರು

ವಿಪಕ್ಷಗಳ ನಡೆಗೆ  ಸಭೆ ಮುಂದೂಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದಿ
ಬೆಂಗಳೂರು: ವಿಧಾನಸಭೆಯಲ್ಲಿ 2ನೇ ದಿನದ ಕಲಾಪ ಶುಕ್ರವಾರ ಆರಂಭವಾಗಿದ್ದು, ಕಲಾಪದಿಂದ ಶಾಸಕ ಬಿ.ಕೆ. ಸಂಗಮೇಶ್ವರ್‌ ಅವರ ಅಮಾನತನ್ನು ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ವಿರೋಧಿಸಿ ವಿಪಕ್ಷ ಸದಸ್ಯರು ಧರಣಿ ಮುಂದುವರಿಸಿದ್ದಾರೆ. ಈ ವೇಳೆ ಸಂಗಮೇಶ್ವರ ಆಕ್ರೋಶದಲ್ಲಿ ಅಂಗಿ ಬಿಚ್ಚಿದ್ದರೆ ಹೊರತು ಬೆತ್ತಲೆ ಆಗಲಿಲ್ಲ. ಅವರ ಅಮಾನತು ವಾಪಸ್ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದರು.

ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಆರಂಭಿಸಿರುವ ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ, 1967 ರವರೆಗೂ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಕ್ರಿಯೆ ಇತ್ತು. ಆದರೆ ಕಾಂಗ್ರೆಸ್ ಹೇಳು ರಾಜ್ಯಗಳ ಸರ್ಕಾರ ವಿಸರ್ಜನೆ ಮಾಡಿತು. ಅಲ್ಲಿಂದ ಒಂದೊಂದೇ ರಾಜ್ಯಗಳ ಚುನಾವಣೆ ಆರಂಭವಾಯಿತು ಎಂದು ಹಿಂದಿನ ಚುನಾವಣೆ ಪ್ರಕ್ರಿಯೆಯ ಬಗ್ಗೆ ವಿವರಿಸಿದರು.

ಗದ್ದಲದ ನಡುವೆಯೂ ಬೊಮ್ಮಾಯಿ ಮಾತು ಮುಂದುವರಿಸಿದರು. ಕಾಂಗ್ರೆಸ್ ಶಾಸಕರ ಕೂಗು ಜೋರಾಗಿ ಮಾಡಿದರು. ಗೊಂದಲದ ವಾತಾವರಣ ಮುಂದುವರಿದಿದ್ದರಿಂದ ವಿಧಾನಸಭಾಧ್ಯಕ್ಷ ಕಾಗೇರಿಯವರು ಮತ್ತೆ ಸದನವನ್ನು ಮುಂದೂಡಿದರು.

ಸಂಗಮೇಶ್ವರ ಅವರ ಕ್ಷೇತ್ರದಲ್ಲಿ ದಾಖಲಾಗಿರುವ ಪೊಲೀಸ್ ಪ್ರಕರಣಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಾ ಸದನದಲ್ಲಿ ಬಟ್ಟೆ ಬಿಚ್ಚಿದ್ದು ಸರಿಯಲ್ಲ. ದುರ್ವರ್ತನೆಯನ್ನು ಕಾಂಗ್ರೆಸ್ ಮುಖಂಡರು ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅಧಿವೇಶನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಚರ್ಚೆ ಗಾಗಿ ಕರೆಯಲಾಗಿದೆ. ಶಾಸಕರ ಹಕ್ಕು ಮೊಟಕು ಆಗಬಾರದು ಎಂದು ವಿಧಾನಸಭಾಧ್ಯಕ್ಷ ಕಾಗೇರಿ ತಿಳಿ ಹೇಳಿದರು. ಇದೇ ವೇಳೆ ನಿಮ್ಮ ಆರ್‌ಎಸ್‌ಎಸ್ ಅಜೆಂಡಾವನ್ನು ನಾವು ಇಲ್ಲಿ ಚರ್ಚಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಪಕ್ಷ ನಾಯಕವಿಪಕ್ಷ ನಾಯಕರು ಧರಣಿ ಕೈಬಿಡದಿದ್ದ ಕಾರಣಕ್ಕೆ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಿಕೆ ಮಾಡಲಾಯಿತು. ಧಿಕ್ಕಾರ, ಕಲಾಪ ಮುಂದೂಡಿಕೆ ಮತ್ತೆ ಆರಂಭ. ಸಭಾತ್ಯಾಗದ ವಿದ್ಯಾಮಾನಗಳು ಪದೇಪದೇ ನಡೆದಿದ್ದರಿಂದ ವಿಧಾನಸಭೆಯಲ್ಲಿ ಮೊದಲ ದಿನವಾದ ಗುರುವಾರ ಕೂಡ ನಡೆಯಲಿಲ್ಲ.

ಒಂದು ರಾಷ್ಟ್ರ ಒಂದು ಚುನಾವಣೆ ಕುರಿತು ವಿಶೇಷ ಚರ್ಚೆ ನಡೆಯುವುದನ್ನು ವಿರೋಧಿಸಿ ವಿಧಾನಮಂಡಲ ಉಭಯ ಸದನಗಳಲ್ಲೂ ಕಾಂಗ್ರೆಸ್ ಪಕ್ಷ ಧರಣಿ ನಡೆಸಿದ್ದ ಕಾಂಗ್ರೆಸ್ ಸದಸ್ಯರ ಧರಣಿ ನಡೆಸುತ್ತಿದ್ದ ವೇಳೆ ಪ್ರತಿಭಟನೆ ತೋರಿದ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ಅಮಾನತು ಮಾಡಿರುವುದು ಕೋಲಾಹಲ ಕಾರಣವಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...