NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪೆಟ್ರೋಲಿಯಂ ಉತ್ಪನ್ನ GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ: ಎಚ್‌ಡಿಕೆ ಆತಂಕ

ಈಗಾಗಲೇ ರಾಜ್ಯಗಳಿಗೆ ಬರಬೇಕಾದ ಸಾವಿರಾರು ಕೋಟಿ ಬಾಕಿಯನ್ನೇ ಕೇಂದ್ರ ಕೊಟ್ಟಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ ಎಂದು ಸರಣಿ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...