NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ: ಮಾ.10ರಂದು ಜಾನಪದ ಕಲಾ ಪ್ರದರ್ಶನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ಪಟ್ಟಣದ ಹಳೆಯ ತಹಸೀಲ ಕಚೇರಿ ಹಿಂಬದಿ ಇರುವ ಕನ್ನಡ ಭವನದಲ್ಲಿ ಬುಧವಾರ (ಮಾ.10) ಬೆಳಗ್ಗೆ 11 ಗಂಟೆಗೆ ಜಾನಪದ ಕಲಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಾನಪದ ಕಲಾ ತಂಡಗಳಿಂದ ತತ್ವಪದ, ಜಾನಪದ ಹಾಡುಗಳು, ಪುರವಂತಿಕೆ ಭಜನಾ ಪದಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಸೊನ್ನದ ಡಾ.ಶಿವಾನಂದ ಸ್ವಾಮೀಜಿ ವಹಿಸಲಿದ್ದಾರೆ.

ಉದ್ಘಾಟನೆಯನ್ನು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಮತ್ತು ತಹಸೀಲ್ದಾರ್‌ ಸಿದರಾಯ ಬೋಸಗಿ ನೆರವೇರಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಪದ್ಮ ಪುರಸ್ಕೃತ ಮಂಜಮ್ಮ ಜೋಗತಿ ನೇತೃತ್ವ ವಹಿಸುವರು.

ರಾಜಶೇಖರ ಸೀರಿ ಅಧ್ಯಕ್ಷತೆ ವಹಿಸುವರು. ಜಾನಪದ ಪರಿಷತ್‌ ಸದಸ್ಯ ರಾಜೇಂದ್ರ ಯರನಾಳ,ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಿ.ಬಿ.ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಉದ್ಯಮಿಗಳಾದ ಬಸವರಾಜ ಸಾಸಾಬಾಳ, ಬಾಪುಗೌಡ ಪಾಟೀಲ, ವೀರೇಶ ಕಂದಗಲ, ಶಾಂತಲಿಂಗ ಪಾಟೀಲ, ನಾಗಪ್ಪ ಸಜ್ಜನ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಎಸ್.ಕೆ.ಬಿರಾದಾರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ