ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 8 ನೇ ಬಾರಿಯ ಬಜೆಟ್ ಮಂಡನೆಗೆ ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನುಮತಿ ನೀಡುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.
ಇದರಿಂದ ಸದಸದಲ್ಲಿ ಕೆಲ ನಿಮಿಷ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಇರುವುದು ಒಂದು ರೀತಿಯ ಅನೈತಿಕ ಸರ್ಕಾರ ಹೀಗಾಗಿ ಬಜೆಟ್ ಮಂಡನೆಗೆ ನಮ್ಮ ವಿರೋಧವಿದೆ ಎಂದು ಹೇಳಿದರು.
ವಿರೋಧದ ನಡುವೆಯೂ 2021-2022ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು, ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿದ್ದಾರೆ. ಇದೇ ವೇಳೆ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ
ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರ ರಾಜ್ಯದ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಫಲವಾಗಿದೆ. ಕೋವಿಡ್ ಸಂಕಷ್ಟ ದುಸ್ವಪ್ನವಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗುಚತ್ತಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆಂದು ಹೇಳಿದ್ದಾರೆ.
Lekkavilla budjet mandane ansuthe