NEWSನಮ್ಮರಾಜ್ಯಸಂಸ್ಕೃತಿಸಿನಿಪಥ

ಜನಪ್ರಿಯ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರಾದ  ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಶನಿವಾರ ಬೆಳಗ್ಗೆ ನಿಧನರಾದರು.

ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನಶಂಕರಿಯ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.  ಬೆಳಗ್ಗೆ 10.30ರಿಂದ ಅವರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

11 ಗಂಟೆಗೆ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದರು. ಕನ್ನಡ ಸಾಹಿತ್ಯಲೋಕದಲ್ಲಿ ಎನ್‌ಎಸ್‌ಎಲ್‌ ಎಂದೇ ಮನೆಮಾತಾಗಿದ್ದ ಅವರು ಭಾವಗೀತೆ, ಸಾಹಿತ್ಯ ಅನುವಾದ, ನವ್ಯಕವಿತೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದರು. ಕನ್ನಡ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೃತಿ ರಚನೆ ಮಾಡಿದ್ದಾರೆ.

ಶೇಕ್ಸ್ಪಿಯರ್, ಎಲಿಯಟ್‌ ಸೇರಿದಂತೆ ಮುಂತಾದ ಇಂಗ್ಲಿಷ್ ಸಾಹಿತಿಗಳ ಕಾವ್ಯಗಳನ್ನು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ