ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಂಬೈಗೆ ಕರೆದುಕೊಂಡು ಹೋದವರೆ ಇದನ್ನೆಲ್ಲ ಮಾಡಿರೋದ ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಮುಂಬೈಗೆ ಹೋದ 12ಮಂದಿಯ ಸೀಡಿಗಳಿಗೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಮುಂಬೈಗೆ ಕರೆದುಕೊಂಡು ಹೋದವರೇ ಇದನ್ನೆಲ್ಲ ಮಾಡಿರೋದಾ? ಸಿನಿಮಾರಂಗದ ಪರಿಣತರು ಜೊತೆಯಲ್ಲಿದ್ದರು. ಅವರೇನಾದರೂ ಮಾಡಿರಬಹುದ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ
ಸಿಡಿಯಲ್ಲಿ ಇದ್ದಾರೆ ಎನ್ನಲಾದ ಯುವತಿಯನ್ನು ಸಂತ್ರಸ್ತೆ ಎನ್ನುತ್ತಿದ್ದೀರಿ, ಆ ಹೆಣ್ಣುಮಗಳು ಭೇಟಿ ನೀಡಿದ ಸ್ಥಳದ ವಿವರ, ಆಕೆಯ ಭಾವಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಲಾಗಿದೆ. ಆಕೆ ಸಂತ್ರಸ್ತರಾಗಿದ್ದರೆ, ಅವರ ಕುಟುಂಬಕ್ಕೆ ನಿಜವಾಗಿಯೂ ಕಿರುಕುಳ ಆಗಿದ್ದರೆ ಸಾರ್ವಜನಿಕವಾಗಿ ಬಂದು ದೂರು ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಘಟನೆಯಿಂದ ನೊಂದುಕೊಂಡ ಆಕೆಯ ಕುಟುಂಬವನ್ನು ಸಂತ್ರಸ್ತರು ಎನ್ನಬೇಕೋ ಇಲ್ಲ ಯುವತಿಯನ್ನು ಸಂತ್ರಸ್ತೆಯನ್ನಬೇಕೋ? ಇನ್ನೊಂದೆಡೆ ಸಿಡಿ ನಕಲಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಹೀಗಾದರೆ ಅವರನ್ನು, ಅವರ ಸಹೋದರರು ಮತ್ತು ಕುಟುಂಬದ ಸದಸ್ಯರನ್ನು ಸಂತ್ರಸ್ತರು ಎನ್ನಬೇಕೋ ಎಂದು ಎಚ್‌ಡಿಕೆ ಹೇಳಿದ್ದಾರೆ.
ಸಲಹೆ ಕೊಟ್ಟವರಾರು
6 ಮೇಧಾವಿ ಸಚಿವರು ತಮ್ಮ ಸಿಡಿ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದಾರೆ. ಹಾಗಾದರೆ ಅವರಿಗೆ ಸಲಹೆ ಕೊಟ್ಟವರು ಯಾರು ಎಂಬುದು ಪ್ರಶ್ನೆ. ಆತ್ಮವಿಶ್ವಾಸ ಇದ್ದಿದ್ದರೆ ತಡೆಯಾಜ್ಞೆ ತರುವುದೇಬಿತ್ತು ಎಂದು ಪ್ರಶ್ನಿಸಿದ್ದಾರೆ.
ಇವೆಲ್ಲವೂ ವ್ಯಕ್ತಿಯ ಖಾಸಗಿ ಬದುಕಿನ ಹವ್ಯಾಸಕ್ಕೆ ಸಂಬಂಧಿಸಿದ ವಿಷಯಗಳು. ಈ ಸಂಗತಿಯನ್ನು ರೆಕಾರ್ಡ್ ಮಾಡಿ ರಾಜಕೀಯಕ್ಕೆ ಬಳಸುವ ಕೆಲಸವನ್ನು ನಮ್ಮ ಕುಟುಂಬ ಎಂದು ಮಾಡಿಲ್ಲ. ನಾನು ಕೂಡ ಒಮ್ಮೆ ತಪ್ಪು ಮಾಡಿದ್ದೆ. ವಿಧಾನಸಭೆಯಲ್ಲಿ ಅದನ್ನು ಒಪ್ಪಿಕೊಂಡಿದ್ದೇನೆ, ತಿದ್ದಿಕೊಂಡು ನಡೆಯುವುದು ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.