ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಕಳೆದ ಡಿಸೆಂಬರ್ 10ರಿಂದ 14ರ ವರೆಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆ ವೇಳೆ ಕೊಟ್ಟ ಭರವಸೆ ಇನ್ನೂ ಈಡೇರದ ಕಾರಣ ಮಾ.2ರಂದು ನೌಕರರ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.
ಇನ್ನು ಆ ವೇಳೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳಲ್ಲಿ ಸರ್ಕಾರಿ ನೌಕರರನ್ನಾಗಿ ಮಾಡುವ ಬೇಡಿಕೆ ಬಿಟ್ಟು ಉಳಿದ 9 ಬೇಡಿಗಳನ್ನು ಈಡೇರಿಸುತ್ತೇವೆ ಎಂದು ಲಿಖಿತ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದುವರೆಗೂ ಯಾವೊಂದು ಬೇಡಿಕೆಯನ್ನೂ ಈಡೇರಿಸಿಲ್ಲ.
ಹೀಗಾಗಿ ನಾಲ್ಕು ನಿಗಮಗಳ ನೌಕರರು ಮಾ.2ರಂದು ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಬೃಹತ್ ಸಮಾವೇಶ ನಡೆಸಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ರೂಪಿಸುವ ಮತ್ತು ಮಾ.8ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರಿಸುವ ಅಂಶವನ್ನು ಸೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲು ನಿರ್ಧರಿಸಬೇಕಿದೆ.
ಆದ್ದರಿಂದ ನಮ್ಮ ನೌಕರರು ಅದರಲ್ಲೂ ವಾರದ ರಜೆ ಇತರ ಕಾರಣಗಳಿಗೆ ರಜೆ ಹಾಕಿರುವವರು ಬರಬೇಕು ಎಂದು ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಮತ್ತು ಆನಂದ್ ಮನವಿ ಮಾಡಿದ್ದಾರೆ.