NEWSನಮ್ಮರಾಜ್ಯರಾಜಕೀಯ

ಇಂಧನ ಮೇಲಿನ ತೆರಿಗೆ ಹೊರೆ ಇಳಿಸದೆ ಜನರಿಗೆ ಟೋಪಿ ಹಾಕುವ ಬಜೆಟ್‌: ಸಿದ್ದರಾಮಯ್ಯ

2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿಜೆಪಿ ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದು ಆರೋಪಿಸಿದರು.

ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ.

ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ.

ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು.

2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ.

2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ.

ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ.

ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿ ಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರದ ಅವಧಿಯಲ್ಲಿ ಅದು ಶೇ.20 ರ ಆಸುಪಾಸಿನಲ್ಲಿ ಇತ್ತು.

2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ.

2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು ಎಂದು ವಿವರಿಸಿದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...