ಕೃಷಿನಮ್ಮರಾಜ್ಯ

ಕಬ್ಬು ಬೆಳೆಗಾರರ ಸಂಘ ಚಂದಾವಸೂಲಿ ಮಾಡುತ್ತಿಲ್ಲ- ವಂಚನೆಗೆ ಒಳಗಾಗದಿರಿ: ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಸಂಘದ ಹೆಸರಿನಲ್ಲಿ ವಿಶ್ವ ರೈತ ದಿನಾಚರಣೆ (ರೈತರ ಹಬ್ಬ) ಆಚರಣೆ ಅಂಗವಾಗಿ ಯಾವುದೇ ರಾಷ್ಟ್ರೀಯ ಹಬ್ಬಗಳ ಆಚರಣೆ – ಇನ್ನಿತರೆ ಸಂಘದ ಸಭೆ ಸಮಾರಂಭಗಳನ್ನು ನಡೆಸಲು ಯಾವುದೇ ಚಂದಾ ವಸೂಲಿ ಮಾಡುತ್ತಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ನೌಕರರು, ರಾಜಕಾರಣಿಗಳು, ಜನಪ್ರತಿನಿಧಿಗಳು ಹಾಗೂ ಖಾಸಗಿ ಸಂಘ ಸಂಸ್ಥೆಗಳಲ್ಲಿ ಕಬ್ಬು ಬೆಳೆಗಾರರ ಸಂಘದ ಹೆಸರಿನಲ್ಲಿ ಚಂದಾ ವಸೂಲಿ ಮಾಡುತ್ತಿರುವುದು ಕೇಳಿ ಬರುತ್ತಿದೆ. ಹೀಗಾಗಿ ನಮ್ಮ ಸಂಘಟನೆ ಯಾರ ಬಳಿಯೂ ಚಂದಾ ವಸೂಲಿ ಮಾಡುವುದಿಲ್ಲ. ಅಂಥ ಅವಶ್ಯಕತೆ ಬಿದ್ದಾಗ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರಿಂದಲೇ ಹಣ ಸಂಗ್ರಹಿಸಿ ಖರ್ಚು ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಲೆಕ್ಕವನ್ನು ಒಪ್ಪಿಸುತ್ತೇವೆ. ಇದು ನಮ್ಮ ಸಂಘದ ಸಿದ್ಧಾಂತ.

ಆದರೆ, ಚಂದಾ ವಸೂಲಿಗೆ ಬಂದವರಿಗೆ ಹಣ ಕೊಟ್ಟು ವಂಚನೆಗೆ ಒಳಗಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ತಿಳಿಸಿರುವ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹೆಸರಿನಲ್ಲಿ ಪುಸ್ತಕ – ಬಿಡುಗಡೆ ಮಾಡುತ್ತೇವೆ ಎಂದು ಅಲ್ಲದೆ ರಾಷ್ಟ್ರೀಯ ಹಬ್ಬಗಳ ಆಚರಣೆ ಹೆಸರಿನಲ್ಲಿ ಹಣ ಮತ್ತು ದವಸ ಧಾನ್ಯಗಳು ಸೇರಿದಂತೆ ಚಂದಾ ವಸೂಲಿ ಮಾಡುತ್ತಿರುವುದು ಕೇಳಿಬಂದಿದೆ. ಇದಕ್ಕೆ ಸಂಘಟನೆಯಾಗಲಿ, ಸಂಘದ ಪದಾಧಿಕಾರಿಗಳಾಗಲಿ ಜವಾಬ್ದಾರರಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ ಈ ರೀತಿಯ ವಂಚನೆಗೆ ಒಳಗಾಗಬೇಡಿ. ಸಂಘದ ಹೆಸರಿನಲ್ಲಿ ಚಂದಾವಸೂಲಿಗೆ ಬರುವಂತವರ ಮೇಲೆ ಅನುಮಾನ ಬಂದರೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳಿಗೆ ಒಪ್ಪಿಸಿ ಎಂದು ಅತ್ತಹಳ್ಳಿ ದೇವರಾಜ್ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ