NEWS

ಮೈಸೂರು: ಸಿನಿಮಾ, ಧಾರಾವಾಹಿಯಲ್ಲಿ ಚಾನ್ಸ್‌ ಕೊಡಿಸುವುದಾಗಿ 50 ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಿನಿಮಾ, ಧಾರವಾಹಿಯಲ್ಲಿ ಚಾನ್ಸ್‌ ಕೊಡಿಸುವುದಾಗಿ 50 ಕ್ಕೂ ಹೆಚ್ಚು ಮಹಿಳೆಯರನ್ನು ನಂಬಿಸಿ ಅವರಿಂದ ಹಣ ಸುಲಿಗೆ ಮಾಡಿ ವಂಚಿಸಿರುವ ಘಟನೆ ಅರಮನೆಗಳ ನಗರಿ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಗಿರೀಶ್ ಅಲಿಯಾಸ್ ಸಿನಿಮಾ ಗಿರೀಶ್ ಎಂಬಾತನೆ ವಂಚಕನಾಗಿದ್ದು, ಈತನ ವಿರುದ್ಧ ಮೋಸಹೋದ ಮಹಿಳೆಯರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಈತ ಮೈಸೂರಿನ ಗುರುಕಾರ್ ರೇವಣ್ಣ ರಸ್ತೆಯ ನಿವಾಸಿ. ಸಿನಿಮಾ, ಧಾರವಾಹಿಯಲ್ಲಿ ಮಿಂಚಬೇಕು ಎಂಬ ಆಸೆಯಿಂದ ಈತನ ಬಳಿಗೆ ಬಂದ ಬರೋಬ್ಬರಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿದ್ದಾನೆ. ವಂಚಕ ಮಹಿಳೆಯರನ್ನು ನಂಬಿಸಲು ಮಹಿಳೆಯರಿಂದ ಹಣ ಪಡೆಯುವಾಗ ತಾನೇ ವಿಡಿಯೋ ಮಾಡುತ್ತಿದ್ದ. ಆ ಮೂಲಕ ಮಹಿಳೆಯರ ನಂಬಿಕೆಯನ್ನು ಇನ್ನಷ್ಟು ಗಳಿಸುತ್ತಿದ್ದ. ಈತ ವಂಚನೆ ಮಾತ್ರವಲ್ಲದೇ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮೋಸಕ್ಕೊಳಗಾದ ಕೆಲ ಮಹಿಳೆಯರು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮೊದಲು ಸಿನಿಮಾ, ಧಾರಾವಾಹಿಗೆ ಕಲಾವಿದರು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡುತ್ತಿದ್ದ. ಆ ಜಾಹೀರಾತು ನೋಡಿ ಈತನನ್ನು ಭೇಟಿ ಮಾಡಿದವರಿಗೆ ತಾನೇ ಕಥೆ ಹೇಳಿ ಯಾಮಾರಿಸಿದ್ದಾನೆ. ಕೆಲವರಿಗೆ ತಾನು ಪೊಲೀಸ್ ಎಂದು ಕೂಡ ಸುಳ್ಳು ಹೇಳಿದ್ದಾನೆ.

ವಂಚಕನ ಕಟ್ಟುಕತೆಯನ್ನು ನಂಬಿದ ಹಲವರು ಬಳಿಕ ಈತ ಮೋಸಗಾರ ಎಂದು ತಿಳಿದು ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯಕ್ಕೆ ಆರೋಪಿ ಗಿರೀಶ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಖತರ್ನಾಕ್ ಗಿರೀಶ್‌ನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ತಮಗೆ ನ್ಯಾಯ ಕೊಡಿಸುವಂತೆ ನಗರ ಪೊಲೀಸ್ ಕಮಿಷನರ್‌ಗೂ ಮಹಿಳೆಯರು ಮನವಿ ಮಾಡಿದ್ದಾರೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...