ಮೈಸೂರು ಮಿತ್ರ- ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಮಾಲೀಕರು, ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ ಇನ್ನಿಲ್ಲ

ಮೈಸೂರು: ಮೈಸೂರು ಮಿತ್ರ (Mysooru mitra) ಮತ್ತು ಸ್ಟಾರ್ ಆಫ್ ಮೈಸೂರು (Star of mysore) ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು.
ಮೈಸೂರು ಮಿತ್ರ ತ್ರಿಕೆಯ ಸಂಸ್ಥಾಪಕರು ಮತ್ತು ಪ್ರಕಾಶಕರೂ ಆಗಿದ್ದ ಅವರು, ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ಕೆ.ಬಿ.ಗಣಪತಿ ಮೂಲತಃ ಕೊಡಗಿನವರು. ತಮ್ಮ ವರದಿಗಾರಿಕೆ, ಅಂಕಣಗಳ ಮೂಲಕ ಗಮನ ಸೆಳೆದಿದ್ದ ಅವರು ಸದಾ ಸುದ್ದಿ ಮನೆಯಲ್ಲಿ ಕ್ರಿಯಾಶೀಲವಾಗಿದ್ದವರು.
ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ: ಕೆ.ಬಿ.ಗಣಪತಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ʼಲೈಫ್ ಆಂಡ್ ಟೈಮ್ಸ್ʼ ಎಂಬ ಪುಸ್ತಕವನ್ನು ಬರೆದಿದ್ದಾರೆ. ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕರಾದ ಅವರು ಬಾಂಬೆಯಿಂದ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. 1961- 1965ರವರೆಗೆ ಬೆಂಗಳೂರಿನಲ್ಲಿ ವಕೀಲರಾಗಿ, 1970ರಲ್ಲಿ ಪೂನಾದಲ್ಲಿ ಜಾಹೀರಾತು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಮೈಸೂರು ಕೇಂದ್ರ ಭಾರತೀಯ ವಿದ್ಯಾಭವನದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
1978ರಲ್ಲಿ ಅವರು ಮೈಸೂರಿನಲ್ಲಿ ಎರಡು ಪತ್ರಿಕೆಗಳನ್ನು ಸ್ಥಾಪಿಸಿ ಪ್ರಕಟಿಸಿದರು. ಒಂದು ಇಂಗ್ಲಿಷ್‌ನಲ್ಲಿ ‘ ಸ್ಟಾರ್ ಆಫ್ ಮೈಸೂರು’ ಮತ್ತು ಇನ್ನೊಂದು ಕನ್ನಡದಲ್ಲಿ ‘ಮೈಸೂರು ಮಿತ್ರ’. ಅಂದಿನಿಂದ ಅವರು ಎರಡೂ ಪತ್ರಿಕೆಗಳ ಸಂಪಾದಕ ಮತ್ತು ಪ್ರಕಾಶಕರಾಗಿದ್ದರು. 1993 ಮತ್ತು 1995ರ ನಡುವೆ ಕರ್ನಾಟಕ ಪತ್ರಿಕಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದರು.
2001ರಲ್ಲಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ನೀಡಲಾಯಿತು. ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರೂ ಆಗಿದ್ದರು. ವ್ಯಾಪಕವಾಗಿ ಪ್ರಯಾಣಿಸಿರುವ ಅವರು, ಆಗ್ನೇಯ ಏಷ್ಯಾ, ಅಮೆರಿಕ, ಇಸ್ರೇಲ್, ಈಜಿಪ್ಟ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾಗಳಿಗೆ ಭೇಟಿ ನೀಡಿದ್ದಾರೆ. ಆರು ವರ್ಷಗಳ ಕಾಲ ಅವರು ಕಾವೇರಿ ಕಾಲೇಜಿನ ಉಪಾಧ್ಯಕ್ಷರಾಗಿದ್ದರು.
ಕೆ.ಬಿ.ಗಣಪತಿ ಅವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಹಲವಾರು ಕಾದಂಬರಿಗಳನ್ನು ಬರೆದು ಪ್ರಕಟಿಸಿದ್ದಾರೆ. 1992ರಲ್ಲಿ ಕನ್ನಡದಲ್ಲಿ ʼಆದರ್ಶವಾದಿʼ ಎಂಬ ಕಾದಂಬರಿಯನ್ನು ಬರೆದರು. ಮುಂದಿನ ವರ್ಷ (1993) ಇಂಗ್ಲಿಷ್‌ನಲ್ಲಿ ʼಅಮೇರಿಕಾ – ಆನ್ ಏರಿಯಾ ಆಫ್ ಲೈಟ್ʼ ಎಂಬ ಪ್ರವಾಸ ಕಥನ ಬರೆದರು.
1994ರಲ್ಲಿ ಇಂಗ್ಲಿಷ್‌ನಲ್ಲಿ ʼದಿ ಕ್ರಾಸ್ ಆಂಡ್ ದಿ ಕೂರ್ಗ್ಸ್ʼ ಎಂಬ ಮತ್ತೊಂದು ಕಾದಂಬರಿಯನ್ನು ಬರೆದರು. ಇದನ್ನು ನಂತರ ಕನ್ನಡದಲ್ಲಿಯೂ ಬರೆದರು. 2003ರಲ್ಲಿ ʼಅಬ್ರಕಾಡಬ್ರಾʼ ಎಂಬ ಆಯ್ದ ಅಂಕಣಗಳ ಸಂಗ್ರಹ ಪ್ರಕಟಿಸಿದರು. 2009ರಲ್ಲಿ, ಅವರು “ಗಾಂಧೀಸ್ ಎಪಿಸ್ಟಲ್ ಟು ಒಬಾಮಾʼ ಎಂಬ ಇಂಗ್ಲಿಷ್ ಕೃತಿ ಬರೆದರು.
ಪತ್ರಕರ್ತರ ಸಂಘ ಸಂತಾಪ: ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಎಲ್ಲರಿಗೂ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
Related

You Might Also Like
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...
KSRTC “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ”: ನೌಕರರಿಗೆ 38 ತಿಂಗಳ ಹಿಂಬಾಕಿ, 2024ರ ವೇತನ ಹೆಚ್ಚಳ ಮಾಡಲಾಗದಿದ್ದರೂ ಸರ್ಕಾರದಿಂದ “ಶಕ್ತಿಯ” ಒಣಾಡಂಬರ..!
ಬೆಂಗಳೂರು: "ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ" ಅಂದಂಗೆ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ...
KSRTC: ಹೆಚ್ಚು ಅಪಘಾತಕ್ಕೀಡಾಗುತ್ತಿರುವ ಬಸ್ಗಳು- ಎಂಡಿ ಅಕ್ರಮ್ ಪಾಷ ಕಳವಳ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹೊಸದಾಗಿ ನೇಮಕಗೊಂಡ ಚಾಲಕ ಕಂ ನಿರ್ವಾಹಕರಿಗೆ ಪರಿಣಾಮಕಾರಿ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್...