Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಬೆಂಗಳೂರಿನಲ್ಲಿ ಮೊಳಗಿತು ಪಂಚಮಸಾಲಿ ಪಾಂಚಜನ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು 2 ಎ ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತರು ಬೃಹತ್‌ ಹೋರಾಟ ನಡೆಸುತ್ತಿದ್ದು,  ಪಂಚಮಸಾಲಿ ಕೂಡಲ ಸಂಗಮ ಪೀಠದ ಶ್ರೀ ಜಯಮೃತುಂಜಯ ಸ್ವಾಮೀಜಿ  ನೇತೃತ್ವ ವಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.

38 ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ ನಂತರ ಅವರು ಇಂದು ಪಂಚಜನ್ಯ ಮೊಳಗಿದ್ದಾರೆ.  ಈ ಸಮಯದಲ್ಲಿ ಪಂಚಮಸಾಲಿ ಸ್ವಾಮೀಜಿಗಳು, ಪ್ರತಿನಿಧಿಗಳು ಮತ್ತು ಪ್ರಮುಖರು ಭಾಗಿಯಾಗಿದ್ದಾರೆ. ಮೂರು ಪಕ್ಷಗಳ ಐವರು ಸದಸ್ಯರ ನಾಯಕನನ್ನು ಆಹ್ವಾನಿಸಲಾಗಿದೆ. ಸಮಾವೇಶದ ನಂತರ, ಸ್ವಾಮೀಜಿಗಳು ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದು, ಸ್ವಾಮೀಜಿಯ ನೇತೃತ್ವದಲ್ಲಿ ರ‍್ಯಾಲಿ ನಡೆಯಲಿದೆ. ಆದರೆ ವಿಧಾನ ಸೌಧದ ಕಡೆಗೆ ರ‍್ಯಾಲಿ ಹೋಗಲು ಅನುಮತಿ ನೀಡಿಲ್ಲ.

ಸಮಾವೇಶಕ್ಕೆ ಮಳೆ ಅಡ್ಡಿ
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಮಳೆ ಅಡ್ಡಿಯಾಗಿದ್ದು, ಮೈದಾನದಲ್ಲಿ ಸೇರಿರುವ ಸಾವಿರಾರು ಮಂದಿ ತಾವು ಕಳಿತಿದ್ದ ಕುರ್ಚಿಗಳನೇ ತಲೆ ಮೇಲೆ ಎತ್ತಿಕೊಂಡು ಮಳೆಯಿಂದ ರಕ್ಷಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಮರಗಳ ಬುಡದಲ್ಲಿ ನಿಂತಿದ್ದರು. ಯುವ ಸಮೂಹ ಅದೇನನ್ನು ಲೆಚ್ಚಿಸದೆ ಕೇಕೆ ಹಾಕಿ ಮಳೆಯಲ್ಲೇ ಸಮಾವೇಶ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ