NEWSನಮ್ಮಜಿಲ್ಲೆರಾಜಕೀಯ

ಪಾಂಡವಪುರ: ಡಿ.1ರಂದು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಸಭೆ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಮುಂದಿನ ಕಾರ್ಯಕ್ರಮಗಳು ಮತ್ತು ರೂಪುರೇಷೆಗಳ ಬಗ್ಗೆ ಚರ್ಚಿಸಲು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಕಾಂಗ್ರೆಸ್ ಪಕ್ಷದ ಅಭಿಮಾನಿಗಳ ಸಭೆಯನ್ನು ಡಿ.1ರ ಗುರುವಾರ ಮಧ್ಯಾಹ್ನ 1:30 ಗಂಟೆಗೆ ಪಾಂಡವಪುರದ TAPCMS ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.

ಈ ಸಭೆಗೆ AICC ವೀಕ್ಷಕ ರೋಜಿ ಜಾನ್, KPCC ಕಾರ್ಯಾಧ್ಯಕ್ಷ ಧ್ರುವ ನಾರಾಯಣ, KPCC ವೀಕ್ಷಕ ಬಿ.ಎಸ್. ಶಿವಣ್ಣ, ಮೇಲುಕೋಟೆ ಕ್ಷೇತ್ರದ ಆಕಾಂಕ್ಷಿಗಳು ಮತ್ತುKPCC ಪ್ರಧಾನ ಕಾರ್ಯದರ್ಶಿ ಡಾ. ಎಚ್. ಎನ್. ರವೀಂದ್ರ, KPCC ಸದಸ್ಯರು ಮತ್ತು ಮೇಲ್ಕೋಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಎಚ್. ತ್ಯಾಗರಾಜು.

KPCC ಸದಸ್ಯ ಸಿ.ಕೆ. ನಾಗರಾಜುರವರು, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಮತ್ತು KPCC ಕಿಸಾನ್ ಸೆಲ್ ರಾಜ್ಯಾಧ್ಯಕ್ಷ ಸಚಿನ್ ಮಿಗ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಕೆ. ಎಸ್. ಆನಂದ್ ಕುಮಾರ್, ಸಿ. ನಾಗಭೂಷಣ್ ಮತ್ತು ಮೇಲ್ಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಆಗಮಿಸಲಿದ್ದಾರೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತ, ಮುಖಂಡರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷ ಎಚ್. ಕೃಷ್ಣೇಗೌಡ ತಿಳಿಸಿದ್ದಾರೆ.
   ವರದಿ : ವಿಶ್ವನಾಥನ್, ಪಾಂಡವಪುರ

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...