NEWSಆರೋಗ್ಯನಮ್ಮಜಿಲ್ಲೆ

ಪಾಂಡವಪುರ: ಗರ್ಭಕೋಶ, ಸ್ತನ ಕ್ಯಾನ್ಸರ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ಎಚ್‌ಎನ್‌ಆರ್ ಫೌಂಡೇಶನ್ ವತಿಯಿಂದ ಮಾಜಿ‌ ಶಾಸಕ ಕೆ.ಕೆಂಪೇಗೌಡ ಅವರ ಸ್ಮರಣಾರ್ಥ ಬಿಜಿಎಸ್ ಗ್ಲೋಬಲ್‌ ವೈದ್ಯಕೀಯ ಮಹಾ ವಿದ್ಯಾಲಯ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ ಅವರ ಸಹಯೋಗದಿಂದ ಗರ್ಭಕೋಶ, ಸ್ತನ ಕ್ಯಾನ್ಸರ್‌ ಹಾಗೂ ಸಾಮಾನ್ಯ ಕಾಯಿಲೆಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ 500ಕ್ಕೂ ಮಂದಿ ತಪಾಸಣಾಕ್ಕೊಳಪಟ್ಟರು. 30ಕ್ಕೂ ಹೆಚ್ಷು ಮಂದಿ‌ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಅವರಿಗೆ ಶೀಘ್ರವೇ ಶಸ್ತ್ರ ಚಿಕಿತ್ಸೆ ನಡೆಸಿ ಮತ್ತೇ ವಾಪಸ್ ಅವರನ್ನು ಮನೆಗೆ ಕರೆತಂದು ಬಿಡಲಾಗುವುದು ಎಂದು ಎಚ್.ಆರ್.ಎನ್ ಫೌಂಡೇಶನ್ ಅಧ್ಯಕ್ಷ ಡಾ.ಎಚ್.ಎನ್ ರವೀಂದ್ರ ತಿಳಿಸಿದ್ದಾರೆ.

ಈ ವೇಳೆ ಮಾತನಾಡಿ ಅವರು, ಇತ್ತೀಚೆಗೆ ಮಹಿಳೆಯರಿಗೆ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಕಾಣಬರುತ್ತಿದೆ. ಈ ಹಿನ್ನೆಲೆ ಶಿಬಿರ ಆಯೋಜಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಕೃಷ್ಣೇಗೌಡ, ಸಂಪಹಳ್ಳಿ ಉಮೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ಎಚ್. ಎನ್.ದಯಾನಂದ್, ಶ್ಯಾದನಹಳ್ಳಿ ನರೇಂದ್ರಬಾಬು, ಮುಖಂಡರಾದ ಸರ್ವೇಶ್, ಸಿ.ಕೆ.ಮಂಜುನಾಥ್, ಚಿನಕುರಳಿ ಚಂದ್ರಶೇಖರ್, ಹಿರೇಮರಳಿ ಶಿವಕುಕುಮಾರ್, ಕೆ.ಬಿ.ರಾಮು, ಹಾರೋಹಳ್ಳಿ ಕೊನಾರಿ‌ ಮಂಜು ಇತರರಿದ್ದರು.
–  ವರದಿ: ಪಾಂಡವಪುರ ವಿಶ್ವನಾಥ್

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ