ನ್ಯೂಡೆಲ್ಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾದರು.
ಜಸ್ವಂತ್ ಸಿಂಗ್ ಅವರಿಗೆ 82 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಜೂ.25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದಿದ್ದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ 6.55ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿರಲಿಲ್ಲ ಎಂದು ದೆಹಲಿಯ ಸೇನಾ ಆಸ್ಪತ್ರೆ ಸ್ಪಷ್ಟಪಡಿಸಿದೆ.
ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.
ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ( 1980, 1986, 1998, 1999, 2004) ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. (1990, 1991,1996, 2009). ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.
ಜಸ್ವಂತ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿ, ನಂತರ ರಾಜಕೀಯದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಹೇಳಿದ್ದಾರೆ.
Jaswant Singh Ji will be remembered for his unique perspective on matters of politics and society. He also contributed to the strengthening of the BJP. I will always remember our interactions. Condolences to his family and supporters. Om Shanti.
— Narendra Modi (@narendramodi) September 27, 2020
ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಜಸ್ವಂತ್ ಸಿಂಗ್ ಜಿ ತಮ್ಮ ವಿಶಿಷ್ಟ ಛಾಪಿನ ಮೂಲಕವೇ ಗುರುತಿಸಲ್ಪಡಲಿದ್ದಾರೆ. ಅವರು ಬಿಜೆಪಿಯನ್ನು ಸಂಘಟನಾತ್ಮಕವಾಗಿ ಬೆಳೆಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ. ನಮ್ಮ ನಡುವಿನ ಮಾತುಕತೆ ಯಾವತ್ತೂ ನನ್ನ ನೆನಪಿನಲ್ಲಿರುತ್ತದೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಅವರು ತಮ್ಮ ಆರೋಗ್ಯ ಸಮಸ್ಯೆ ವಿರುದ್ಧ ಸಾಕಷ್ಟು ಹೋರಾಡಿದ್ದಾರೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕೊಡಲಿ. ಮಾನವೇಂದ್ರ ಸಿಂಗ್ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
I'm deeply saddened to hear about the passing away of former Union Minister Shri. Jaswant Singh. May his soul rest in peace. I pray God to give his family the strength to bear this pain.
— H D Devegowda (@H_D_Devegowda) September 27, 2020
ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನರಾದ ಬಗ್ಗೆ ಕೇಳಿ ನನಗೆ ತುಂಬಾ ಬೇಸರವಾಗಿದೆ. ಅವr ಆತ್ಮಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಬೇಕೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.
Deeply pained by the passing away of veteran BJP leader & former Minister, Shri Jaswant Singh ji. He served the nation in several capacities including the charge of Raksha Mantri. He distinguished himself as an effective Minister and Parliamentarian.
— Rajnath Singh (@rajnathsingh) September 27, 2020
ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಟ್ವೀಟ್ ಮಾಡಿ, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಚಿವ ಶ್ರೀ ಜಸ್ವಂತ್ ಸಿಂಗ್ ಜಿ ನಿಧನದಿಂದ ತೀವ್ರ ನೋವಾಗಿದೆ. ರಕ್ಷಣಾ ಮಂತ್ರಿ ಉಸ್ತುವಾರಿ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರು. ಜಸ್ವಂತ್ ಅವರು ಪರಿಣಾಮಕಾರಿ ಸಚಿವರು ಮತ್ತು ಸಂಸದರು ಎಂದು ಗುರುತಿಸಿಕೊಂಡ ನಾಯಕರಾಗಿದ್ದರು ಎಂದಿದ್ದಾರೆ.
Saddened by the demise of former Union Minister Shri. Jaswant Singh. My condolences to his family members and well-wishers. pic.twitter.com/l2dqzU3y45
— Siddaramaiah (@siddaramaiah) September 27, 2020
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ನಿಧನದಿಂದ ಬೇಸರವಾಯಿತು. ಅವರ ಕುಟುಂಬ ಸದಸ್ಯರು ಮತ್ತು ಹಿತೈಷಿಗಳಿಗೆ ನನ್ನ ಸಂತಾಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Rip sir