Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಯಾಣಿಕರು, ಚಾಲಕರು ಹಾಗೂ ನಿರ್ವಾಹಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಕಾರ್ಯನಿರ್ವಹಿಸಬೇಕೇ ವಿನಃ ಎಲೆಕ್ಟ್ರಿಕ್ ಬಸ್ ಪೂರೈಸಿದ ಕಂಪನಿಗಳಿಗೆ ಲಾಭ ಮಾಡಿಕೊಡುವುದಕ್ಕಲ್ಲ. ಈ ಕೂಡಲೇ ಗುತ್ತಿಗೆ ಕಂಪನಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕರಿಗೆ ವೇತನ ಪಾವತಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ವಿ. ಸದಂ ಅವರು, ರಾಜಧಾನಿಗೆ ಎಲೆಕ್ಟ್ರಿಕ್ ಬಸ್‌ಗಳ ಅಗತ್ಯವಿದೆ. ಆದರೆ ಇ-ಬಸ್‌ಗಳ ನೆಪದಲ್ಲಿ ಬಿಎಂಟಿಸಿ ಸಂಸ್ಥೆಯನ್ನೇ ಖಾಸಗಿಕರಣಗೊಳಿಸುವುದಕ್ಕೆ ತೀವ್ರ ವಿರೋಧವಿದೆ. ಜತೆಗೆ ಕಾಲ ಕಾಲಕ್ಕೆ ಚಾಲಕರಿಗೆ ವೇತನ ಪಾವತಿಸದಿದ್ದರೆ ಪಕ್ಷದಿಂದ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನು ಬೆಂಗಳೂರು ನಗರಕ್ಕೆ ಸುಮಾರು 600 ಇ-ಬಸ್ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. 3 ಕಂಪನಿಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಆದರೆ, ಈ ಒಪ್ಪಂದದಲ್ಲಿ ಚಾಲಕರು ಮತ್ತು ನಿರ್ವಾಹಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಸ್ ಪೂರೈಸಿದ ಸಂಸ್ಥೆಗಳೇ ಚಾಲಕರನ್ನು ನೇಮಕ ಮಾಡಿಕೊಳ್ಳುತ್ತಿವೆ. ನಿರ್ವಾಹಕರ ಹುದ್ದೆಗಳನ್ನು ಸಂಪೂರ್ಣ ಕಡಿತಗೊಳಿಸುತ್ತಿದೆ. ಸಂಬಳ ವಿಚಾರದಲ್ಲೂ ಚಾಲಕರಿಗೆ ಭದ್ರತೆ ಇಲ್ಲವಾಗಿದೆ.

ಈಗಾಗಲೇ 136 ಬಸ್‌ಗಳನ್ನು ಖಾಸಗಿ ಸಂಸ್ಥೆಯಿಂದ ಪಡೆದುಕೊಳ್ಳಲಾಗಿದ್ದು, ಇವುಗಳನ್ನು ಸಂಪೂರ್ಣವಾಗಿ ಖಾಸಗಿ ಸಂಸ್ಥೆಯೇ ನಿರ್ವಹಿಸುತ್ತಿದೆ. ಕಳೆದ 3 ತಿಂಗಳಿಂದ ಚಾಲಕರಿಗೆ ವೇತನ ನೀಡಿಲ್ಲ. ಕೆಲವು ಚಾಲಕರಿಗೆ ಕೊಟ್ಟಿರುವ ವೇತನದಲ್ಲೂ ನಿಗದಿಗಿಂತ ಕಡಿಮೆ ವೇತನ ಕೊಡಲಾಗಿದೆ. ಅಲ್ಲದೆ ಈ ಕಂಪನಿಗಳು ನೌಕರರ ಭವಿಷ್ಯ ನಿಧಿ ಹಣವನ್ನು ಸಹ ಪಾವತಿಸದೆ ಮೋಸ ಮಾಡುತ್ತಿವೆ. ತಕ್ಷಣ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಚಾಲಕರಿಗೆ ಕೊಡಲಾಗುತ್ತಿರುವ ವೇತನವೇ ಕನಿಷ್ಠ ಪ್ರಮಾಣದ್ದಾಗಿದೆ. ಅದರಲ್ಲೂ ಕಡಿತ ಮಾಡಿಕೊಡಲಾಗುತ್ತಿದೆ. ಜತೆಗೆ ಬಸ್‌ಗಳ ಗ್ಲಾಸ್, ಕಿಟಕಿ ಮತ್ತಿತರ ವಸ್ತುಗಳಿಗೆ ಹಾನಿಯಾದರೆ ಚಾಲಕರ ಸಂಬಳದಿಂದಲೇ ದಂಡ ಪಾವತಿ ಮಾಡಿಕೊಳ್ಳಲಾಗುತ್ತಿದೆ ಇದು ಯಾವ ನ್ಯಾಯ, ಬಸ್‌ಗಳಿಗೆ ವಿಮೆ ಮಾಡಿಸಿಲ್ಲವೇ ಎಂದು ಕಿಡಿಕಾರಿದರು.

ಎಲ್ಲದಕ್ಕಿಂತ ಮುಖ್ಯವಾಗಿ ಬಿಎಂಟಿಸಿ ಘಟಕಗಳು ಮತ್ತು ಬಸ್‌ಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುತ್ತಿರುವುದು ಸರಿಯಲ್ಲ. ಇ-ಬಸ್ ಖರೀದಿಗೆ ಕೇಂದ್ರದಿಂದ ಸಾಕಷ್ಟು ಅನುದಾನ ಸಿಗುತ್ತಿದ್ದರೂ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು ಆಕ್ಷೇಪಾರ್ಹ. ಕಂಪನಿಗಳಿಂದ ಎಲೆಕ್ಟ್ರಿಕ್ ಬಸ್‌ಗಳನ್ನು ಬಿಎಂಟಿಸಿ ಸಂಸ್ಥೆಯೇ ನೇರವಾಗಿ ಖರೀದಿಸಿ ನಿರ್ವಹಿಸಬೇಕು ಎಂದು ಆ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...