NEWSನಮ್ಮರಾಜ್ಯರಾಜಕೀಯ

ಅನುದಾನ ಪಾವತಿ ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನೊಂದವರಿಗೆ ಹೆಗಲು

ಬೆಂಗಳೂರು: 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟು 3,510 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2,040 ಕೋಟಿ ರೂ. ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಇನ್ನೂ 1,205 ಕೋಟಿ ರೂ. ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇನ್ನು ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ 1,890 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, 250 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ 8,666.50 ಕೋಟಿ ರೂ. ಅನುಮೋದನೆ ನೀಡಲಾಗಿದ್ದು, ಈಗಾಗಲೇ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಸೂಚನೆ ನೀಡಿದರು.

2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು 8,666.50 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಬೇಕು ಎಂದರು.

ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ತಿಳಿಸಿದರು.

ಸಚಿವರಾದ ಎಚ್‌.ಕೆ.ಪಾಟೀಲ್‌, ಎಂ.ಬಿ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಪ್ರಿಯಂಕದದ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪಾಲ್ಗೊಂಡರು.

Megha
the authorMegha

Leave a Reply

error: Content is protected !!
Latest news
KSRTC: 'ಸಾರಿಗೆ ಮಿತ್ರ' ಆಪ್ ದುರುಪಯೋಗ- ಕರ್ತವ್ಯಕ್ಕೆ ಹಾಜರಾಗದೆ ಸಹೋದ್ಯೋಗಿಗೆ ಫೋನ್‌ ಕೊಟ್ಟು ಹಾಜರಿ ಪಡೆಯುತ್ತಿರುವ... ಸಾರಿಗೆ ನೌಕರರಿಗೆ ಸಮಾನ ವೇತನ ಸೇರಿದಂತೆ 3 ಬೇಡಿಕೆಗಳ ಈಡೇರಿಕೆಗೆ ಕೂಟ ಒತ್ತಾಯ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್‌ಗೆ ಮ... ಗುಟ್ಕಾ ಉಗಿಯಲು ಬಗ್ಗಿದ ವಿದ್ಯಾರ್ಥಿ ತಲೆಗೆ ಬಡಿದ ಟಿಪ್ಪರ್: ಕ್ಷಣಾರ್ಧದಲ್ಲೇ ರುಂಡ ಕಟ್‌, ಬಸ್ಸಿನಲ್ಲಿ ನೇತಾಡಿದ ಮುಂಡ... KSRTC: ನೌಕರರ ಹೆಚ್ಚಳದ ಶೇ.12.5ರಷ್ಟು ವೇತನ ಜುಲೈ ಅಂದರೆ ಈ ತಿಂಗಳ ವೇತನದಲ್ಲಿ ಅನುಷ್ಠಾನ- ಆಗಸ್ಟ್‌ನಲ್ಲಿ ಎಲ್ಲರ ಖಾತ... NWKRTC: ವಿದ್ಯಾರ್ಥಿಗಳ ಮನವಿ ಪರಿಗಣಿಸಿ ನೂತನ ಬಸ್ ಸೇವೆಗೆ ಚಾಲನೆ- ನಿಗಮದ ಉಪಾಧ್ಯಕ್ಷ ಸುನೀಲ್ ಜೆ. ಹಣಮನ್ನವರ ಇಂದಿನಿಂದ ಎರಡು ತಿಂಗಳ ಕಾಲ: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಕ್ಕೆ ಬರಲಿದ್ದಾರೆ ಇಲಾಖಾ ಸಿಬ್ಬಂದಿ KSRTC: 50 ಹೊಸ ಬಸ್ ನೀಡಿ ಜತೆಗೆ ಆರ್‌ಟಿಒ ಕಚೇರಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ: ಸಾರಿಗೆ ಸಚಿವರಿಗೆ ರಾಜಣ್ಣ ಮ... ದಂಪತಿಗಳ ಏಕಾಂತದಿಂದ ಕಾಂತಿಯುತ ತ್ವಚೆ, ಯುವಕರಾಗಿಡುವ ಮೋಡಿ ಅಡಗಿದೆ! ಇಂದು ಸಾರಿಗೆ ನೌಕರರ ವೇತನ ಸಂಬಂಧ ಕರೆದಿದ್ದ ರಾಜೀ ಸಂಧಾನ ಸಭೆ ಮತ್ತೆ ವಿಫಲ! 2028ರ ವೇಳೆಗೆ ಮಾದಕ ವಸ್ತು- ನಶೆ ಮುಕ್ತ ಕರ್ನಾಟಕವೇ ನಮ್ಮ ಗುರಿ: ಸಿಎಂ ಡಿಕೆಶಿ