ಉಡುಪಿ: ರಾತ್ರಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಅವರ ದೇಹ ಛಿದ್ರಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿಲ್ಲೆಯ ಬ್ರಹ್ಮಾವರದ ನಡುವೆ ಸಾಗಿಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಾದಚಾರಿ ಶೇಖರ್ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟವರು.
ಶೇಖರ್ ಅವರಿಗೆ ಡಿಕ್ಕಿ ಹೊಡೆದ ಬಸ್ ಬಳಿಕ ಅವರ ಮೇಲೆಯೇ ಹರಿದಿದ್ದರಿಂದ ದೇಹದ ಭಾಗಗಳು ಹೆದ್ದಾರಿಯಲ್ಲಿ ಛಿದ್ರಛಿದ್ರವಾಗಿ ಬಿದ್ದಿದ್ದವು.
ಆ ಸ್ಥಳದಲ್ಲಿ ಸಮರ್ಪಕವಾದ ಬೀದಿದೀಪಗಳಿಲ್ಲದ ಕಾರಣ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಬೀದಿದೀಪದ ದುರಸ್ತಿಗೆ ಆಗ್ರಹಿಸಿದರು.