NEWSನಮ್ಮಜಿಲ್ಲೆನಮ್ಮರಾಜ್ಯ

ಅನಧಿಕೃತ ಕಟೌಟ್ ಬಿದ್ದು ಪಾದಚಾರಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಎಪಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಓಲ್ಡ್ ಏರ್‌ ಪೋರ್ಟ್ ರಸ್ತೆಯ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಅನಧಿಕೃತವಾಗಿ ಅಳವಡಿಸಿದ್ದ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದು, ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌. ರಘು ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಪೊಲೀಸರಿಗೆ ದೂರು ಸಲ್ಲಿಸಿದೆ.

ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರ ನೇತೃತ್ವದ ತಂಡ ಕಟೌಟ್ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಸಂತ್ರಸ್ಥರ ಪರವಾಗಿ ದೂರಿ ದಾಖಲಿಸಿದೆ.

ಮೋಹನ್ ದಾಸರಿ ಮತ್ತು ಪಕ್ಷದ ಕಾರ್ಯಕರ್ತರು ಜೀವನ್ ಭೀಮಾ ನಗರ ಪೋಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಟೌಟ್ ಬಿದ್ದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಆರೋಗ್ಯವನ್ನು ಕೂಡ ವಿಚಾರಿಸಿದರು.

ದೂರು ನೀಡಿದ ಬಳಿಕ ಮಾತನಾಡಿದ ಮೋಹನ್ ದಾಸರಿ, ಸಿವಿ ರಾಮನ್ ನಗರ ಶಾಸಕ ಎಸ್‌. ರಘು ತಾವೇ ಖುದ್ದಾಗಿ ತಮ್ಮ ಫೇಸ್‌ಬುಕ್ ಅಧಿಕೃತ ಖಾತೆಯಲ್ಲಿ ಈ ಬ್ಯಾನರ್, ಕಟೌಟ್ ಹಾಕಿರುವುದು ನಾನೇ ಎಂದು ಹೇಳಿದ್ದಾರೆ. 22ರಂದು ರಾಮ ಮಂದಿರ ಉದ್ಘಾಟನೆಯಾಗಿದೆ, ಅದಾದ ಬಳಿಕ ಇಷ್ಟು ದಿನವಾದರೂ ಬ್ಯಾನರ್, ಕಟೌಟ್ ತೆರವು ಮಾಡಿಲ್ಲ.

ಬಿಬಿಎಂಪಿ ಇಂಜಿನಿಯರ್ ಗಳು ಏನು ಮಾಡುತ್ತಿದ್ದಾರೆ, ಕಟೌಟ್‌ ಮತ್ತು ಬ್ಯಾನರ್ ಎಲ್ಲೇ ಹಾಕಿದರು ಅದು ಅನಧಿಕೃತ ಎಂದು ಕೋರ್ಟ್ ಆದೇಶ ಕೊಟ್ಟಿದೆ. ಇದು ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ಲೋಪ, ಇಷ್ಟು ದಿನವಾದರೂ ಯಾಕೆ ತೆರವುಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಮೆಲ್ ವೃತ್ತ, ಬಿಎಂಶ್ರೀ ವೃತ್ತ, ಬೆನ್ನಿಗಾನಹಳ್ಳಿ, ಎನ್‌ಜಿಎಫ್ ವೃತ್ತ, ಇಂದಿರಾನಗರ, ಹಳೇ ವಿಮಾನ ನಿಲ್ದಾಣ ರಸ್ತೆಯ ವಿಶ್ವೇಶ್ವರ ಶಾಲೆಯ ಬಳಿ ಅನಧಿಕೃತ ಕಟೌಟ್ ನಿಲ್ಲಿಸಲಾಗಿದೆ ಎಂದು ಮೋಹನ್ ದಾಸರಿ ಮಾಹಿತಿ ನೀಡಿದರು.

ಆ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ, ಸಾವಿರಾರು ಪಾದಚಾರಿಗಳು ಓಡಾಡುತ್ತಾರೆ. ಅಂತಹ ಜಾಗದಲ್ಲಿ ಕಳೆದ 11 ದಿನದಿಂದ ಅನಧಿಕೃತವಾಗಿ ಕಟೌಟ್ ಅಳವಡಿಸಿದ್ದಾರೆ. ಮತ್ತೊಂದು ಕಟೌಟ್ ಬಿದ್ದು ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು.

ಇಂದು ಆಗಿರುವ ಅನಾಹುತಕ್ಕೆ ಶಾಸಕ ರಘು ಮತ್ತು ಬಿಬಿಎಂಪಿ ಅಧಿಕಾರಿಗಳೇ ನೇರ ಹೊಣೆ, ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ