ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಬಲ ಪೈಪೋಟಿ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬೊಮ್ಮಾಯಿ ಅವರು, ವರುಣಾದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಜನರ ಬೇಡಿಕೆ. ಈ ಬಗ್ಗೆ ಪಾರ್ಲಿಮೆಂಟರಿ ಬೋರ್ಡ್ ಯಡಿಯೂರಪ್ಪ ಅಂತಿಮ ತೀರ್ಮಾನ ಮಾಡುತ್ತಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪೈಪೋಟಿ ಕೊಡುವುದಂತು ಪಕ್ಕ ಎಂದರು.
ಬರೆದಿಟ್ಟುಕೊಳ್ಳಿ ರಾಜ್ಯದಲ್ಲಿ ನೂರಕ್ಕೆ ನೂರು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಘಾಟಿ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆ ನಡೆಯುತ್ತಿವೆ. ಇನ್ನೂ ಒಂದೂವರೆ ತಿಂಗಳು ಸಮಯವಿದೆ. ಎಲ್ಲ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು ಈ ಮಧ್ಯೆ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಆದರೂ ಬಿಜೆಪಿ ನಾಯಕರು ಇನ್ನು ಅಂತಿಮ ತೀರ್ಮಾನಕ್ಕೆ ಬಂದಿಲ್ಲ.