Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ಮಕ್ಕಳು ಬಾಲ ನಟ, ನಟಿಯಾಗಿ ನಟಿಸಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆ ವ್ಯಾಪ್ತಿಗೆ ಸಂಬಂಧಿಸಿದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ/ ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಇಚ್ಛಿಸಿದ್ದಲ್ಲಿ ಇನ್ನೂ ಮುಂದೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕಾಗಿರುತ್ತದೆ.

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟಿ/ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರಿಗೆ 06 ತಿಂಗಳಿಂದ 02 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ಗಳಿಂದ 50 ಸಾವಿರ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 01 ವರ್ಷದಿಂದ 03 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು ‘2ಸಿ’ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (01) ಕಲಂ 3ರ ನಿಬಂಧನೆಗಳನ್ವಯ ಈ ಕೆಳಗಿನ ಪರಿಸ್ಥಿತಿಗಳಿಗೆ/ ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದಾಗಿದೆ.

ಯಾವುದೇ ಮಗುವನ್ನು ಒಂದು ದಿನದಲ್ಲಿ 05 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 03 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.

ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ “ಸಿ” ಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಮುಚ್ಚಳಿಕೆ ಪತ್ರ ಸಲ್ಲಿಸುವುದು. ಭಾಗವಹಿಸುವ ಮಕ್ಕಳ ಪಟ್ಟಿ, ಪಾಲಕರ ಒಪ್ಪಿಗೆ ಪತ್ರಸಲ್ಲಿಸುವುದು.

ಮಗುವಿನ ಸಂರಕ್ಷಣೆಗೆ ಸಂಬಂಧಿಸಿದಂತೆ, ನಿರ್ಮಾಪಕರ ಅಥವಾ ಸಮಾರಂಭದ ಆಯೋಜಕರ ಹೆಸರಗಳನ್ನು ಒದಗಿಸುವುದು.

ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿರಬೇಕು. ಕಲಂ ಬಿ ಯಲ್ಲಿ ಉಲ್ಲೇಖಿಸಿರುವ ಮುಚ್ಚಳಿಕೆಯು 06 ತಿಂಗಳವರೆಗೆ ಮಾನ್ಯವಾಗಿರುತ್ತದೆ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನಗೆಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಈ ಕೆಳಕಂಡ ಸುರಕ್ಷತಾ ನೀತಿಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸುವುದು.

ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸುವುದು.
ಮಗುವಿನ ಸಕಾಲಿಕ ಪೌಷ್ಠಿಕ ಆಹಾರ ಒದಗಿಸುವುದು. ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಚ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು. ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡುವುದು.

ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು. ಯಾವುದೇ ಮಗು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು.

ಮಗುವಿನ ರಕ್ಷಣೆ, ಪೋಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 05 ಮಕ್ಕಳಿಗೆ ಒಬ್ಬರಂತೆ ಜವಬ್ದಾರಿ ವ್ಯಕ್ತಿಯನ್ನು ನೇಮಿಸುವುದು. ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20% ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡವುದು ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು.

ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಚೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆ ಅನೌಪಾಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಅವುಗಳನ್ನು ಭಾಗವಹಿಸುವಂತೆ ಮಾಡಬಾರದು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಇಂಥದ್ದೊಂದು ನಿರ್ಧಾರ ಮಾಡಿದ್ದು, ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಚಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ.

ಮುಂದಿನ ದಿನಗಳಲ್ಲಿ ಮಕ್ಕಳನ್ನು ಚಿತ್ರಕತೆಗೆ ಜಿಲ್ಲಾಧಿಕಾರಿ ಅನುಮತಿ ಇಲ್ಲದೆ ಬಳಸಿಕೊಂಡಿದ್ದೇ ಆದಲ್ಲಿ ಕಾನೂನು ಉಲ್ಲಂಘನೆಯಾಗುತ್ತದೆ. ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರಾವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಎನ್ ಶಿವಶಂಕರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ