ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್ನಲ್ಲಿ ಅತೀ ಇದೇ ಜ.30ರೊಳಗೆ ಅರ್ಜಿಸಲ್ಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮತ್ತು ಹೈ ಕೋರ್ಟ್ ವಕೀಲರಾದ ಎಚ್.ಬಿ. ಶಿವರಾಜು ತಿಳಿಸಿದ್ದಾರೆ.
ಕಳೆದ 2020ರ ಜನವರಿ 1ರಿಂದ ಅಂದರೆ ಸರಿ ಸುಮಾರು 3ವರ್ಷ ಒಂದು ತಿಂಗಳ ಹಿಂದೆಯೇ ನಾಲ್ಕೂ ನಿಗಮಗಳ ಅಧಿಕಾರಿಗಳಿಗೆ ಮತ್ತು ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತು ನೌಕರರು ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಿಲ್ಲದೆ ದುಡಿಯುತ್ತಿದ್ದಾರೆ. ಹೀಗಾಗಿ ಅವರ ವೇತನ ಪರಿಷ್ಕರಣೆಗಾಗಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ವಿವರವಾಗಿ ಸುಮಾರು 60 ಪುಟಗಳನ್ನೊಳಗೊಂಡ ಈ ಅರ್ಜಿಯನ್ನು ಸಿದ್ಧಪಡಿಸಿದ್ದು, ಹೈ ಕೋರ್ಟ್ಗೆ ಹಾಕುವುದೊಂದೆ ಬಾಕಿ ಇದೆ ಎಂದು ವಿಜಯಪಥಕ್ಕೆ ಶಿವರಾಜು ಮಾಹಿತಿ ನೀಡಿದ್ದಾರೆ.