Please assign a menu to the primary menu location under menu

CrimeNEWSದೇಶ-ವಿದೇಶನಮ್ಮರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಭೂ ಡಿನೋಟಿಫಿಕೇಷನ್ ಪ್ರಕರಣದಿಂದ ಹಿಂದೆ ಸರಿದ ಪಿಟಿಷನರ್‌ ಪರ ವಕೀಲರಾದ ಎಚ್‌.ಬಿ.ಶಿವರಾಜು, ರಾಮ್‌ಲಾಲ್‌ ರಾಯ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 1997ರಲ್ಲಿ ಸಿದ್ದರಾಮಯ್ಯನವರ ಆಗ್ರಹದ ಮೇರೆಗೆ ಭೂ ಡಿನೋಟಿಫಿಕೇಷನ್ ಮಾಡಿದ್ದು, ಬಳಿಕ 1998ರಲ್ಲಿ ಅಂದು ಉಪಮುಖ್ಯಮಂತ್ರಿಯಾಗಿದ್ದಾಗ 10 ಗುಂಟೆಗಳನ್ನು ಅಕ್ರಮವಾಗಿ ಖರೀದಿಸಿ ಮನೆ ನಿರ್ಮಿಸಿ ಮಾರಾಟ ಮಾಡಿದ್ದರು ಎಂದು ಆರೋಪಿಸಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದಿಂದ ಪಿಟಿಷನರ್‌ ಪರ ವಕೀಲರು ಹಿಂದೆ ಸರಿದಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಪಿಟಿಷನ್‌ ( ಕೇಸ್‌ ನಂ: 8814/2021) ಹಾಕಿದ್ದು ಗಂಗರಾಜು ಪರ ವಕೀಲರಾದ ಶಿವರಾಜು ಎಚ್.ಬಿ. ರಾಂ ಲಾಲ್‌ ರಾಯ್‌ ಅವರು ವಕಾಲತ್ತು ವಹಿಸಿದ್ದರು. ಆದರೆ, ಕೆಲ ಕಾರಣದಿಂದ ವಕೀಲರು ಎನ್‌ಒಸಿಕೊಡುವ ಮೂಲಕ ಈ ಪ್ರಕರಣದಿಂದ ಹೊರಬಂದಿದ್ದಾರೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಮೈಸೂರಿನ ವಿಜಯನಗರದ ಎರಡನೇ ಬಡಾವಣೆಯಲ್ಲಿರುವ ಸ.ನಂ 70/4ಎ ರಲ್ಲಿ ಸಿದ್ದರಾಮಯ್ಯ ಅವರು 10 ಗುಂಟೆ ಎಂಡಿಎ ನಿವೇಶನ ಡಿನೋಟಿಫೈ ಮಾಡಿ ಅಕ್ರಮವಾಗಿ ಮನೆ ನಿರ್ಮಿಸಿ ಅದನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗಂಗರಾಜು ಅವರು ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ಆದರೆ, ಈ ಕುರಿತಂತೆ ಅಂದು ತನಿಖೆ ನಡೆಸಿದ್ದ ಸ್ಥಳೀಯ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಹೀಗಾಗಿ 2021ರಲ್ಲಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠ ಕ್ಲೀನ್ ಚಿಟ್ ನೀಡಿತ್ತು. ಇದ್ದನ್ನು ಗಂಗರಾಜು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ಇದಕ್ಕೂ ಹಿಂದೆ ಅಕ್ರಮ ಡಿನೋಟಿಫಿಕೇಷನ್ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಕೂಡ ಆದೇಶಿಸಿತ್ತು.

ಅಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಕುರಿತಂತೆ ತಮ್ಮ ವಿರುದ್ಧ ಹೊರಡಿಸಲಾಗಿರುವ ಸಮನ್ಸ್ ರದ್ದು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ನ್ಯಾಯಪೀಠ, ಸಮನ್ಸ್ ರದ್ದುಗೊಳಿಸಿ ಆದೇಶ ನೀಡಿತ್ತು.

ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು ಗಂಗರಾಜು. ಈ ವೇಳೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ತ್ರಿಸದಸ್ಯ ನ್ಯಾಯಪೀಠ ವಾದ ಪ್ರತಿವಾದ ಆಲಿಸಿದ ಬಳಿಕ ಅರ್ಜಿ ವಜಾಗೊಳಿಸಿತ್ತು. ತ್ರಿಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿರುವುದು ಪ್ರಶ್ನಿಸಿ 2021 ರಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಕೇಸ್‌ ನಂ: 8814/2021ರ ಪ್ರಕರಣ ಸಂಬಂಧ ವಕಾಲತ್ತು ವಹಿಸಿರುವ ಶಿವರಾಜು ಎಚ್‌.ಬಿ., ರಾಮ್‌ ಲಾಲ್‌ ರಾಯ್‌ ಅವರು ಎನ್‌ಒಸಿ ಕೊಡುವ ಮೂಲಕ ಕೇಸ್‌ನಿಂದ ಹಿಂದೆ ಸರಿದಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ