CrimeNEWSಸಂಸ್ಕೃತಿ

ಪಿಎಫ್‌ಐ ಬೆದರಿಕೆ : ಮೇಲುಕೋಟೆ ಶ್ರೀ ನಾರಾಯಣ ರಾಮಾನು ಜೀಯರ್‌ಗೆ ವೈ ಮಾದರಿ ಭದ್ರತೆ..!?

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ : ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇದಿತಾ ಪಿಎಫ್‌ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ.

ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್‌ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ಧಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು, ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.

ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.

ಈ ಮಾತಿನಿಂದ ಕೆರಳಿದ ಪಿ.ಎಫ್.ಐ. ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿತ್ತು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.

ಶ್ರೀಗಳಿಗೆ ಈ ಹಿಂದೆಯೂ ಭದ್ರತೆ ನೀಡಿದ್ದು, ಇತ್ತೀಚೆಗೆ ಅದನ್ನು ವಾಪಸ್ಸು ಪಡೆಯಲಾಗಿತ್ತು. ಪಿಎಫ್‌ಐ ಸಂಘಟನೆಯ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ವೈ ಮಾದರಿ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ಸಧ್ಯ ಶ್ರೀಗಳು ತಮಿಳುನಾಡಿನಲ್ಲಿರುವ ಶಾಖಾ ಮಠಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯ ಗುಪ್ತಚರ ಇಲಾಖೆಗೆ ಸೂಚನೆ ಬರಲಿದ್ದು, ನಂತರ ನಮಗೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ