NEWSರಾಜಕೀಯ

ಪಿರಿಯಾಪಟ್ಟಣ: ಕಮಲ ಅರಳಿಸಲು ಕಾರ್ಯಕರ್ತರು ಸಂಕಲ್ಪ ತೊಡಬೇಕು

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಗುಡ್ಡಗಾಡು ಪ್ರದೇಶಗಳಲ್ಲಿ ಕಮಲ ಅರಳಿದ ರೀತಿಯಲ್ಲಿ ಇಲ್ಲಿಯೂ ಕಮಲ ಅರಳಿಸಲು ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಿಜೆಪಿ ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಪಟ್ಟಣದ ಕನ್ನಂಬಾಡಿ ಅಮ್ಮನವರ ದೇವಾಲಯದ ಬಳಿ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಗುರುವಾರ ಪ್ರಕಟಗೊಂಡ ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಬಿಜೆಪಿ ಮೈತ್ರಿಕೂಟದ ಪಾಲಾಗಿವೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಮತ್ತು ದುರ್ಬೀನು ಹಾಕಿ ನೋಡಿದರೂ ಕಾಣದ ರೀತಿಯಲ್ಲಿ ಸೋತಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮಾತನಾಡಿ, ಕರ್ನಾಟಕದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ದೇಶವು ಅತ್ಯಂತ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ.

ಕಾಂಗ್ರೆಸ್ ಪಕ್ಷ  ಜಾತಿವಾದದ ಮೂಲಕ, ಜೆಡಿಎಸ್ ಪಕ್ಷ  ಕುಟುಂಬವಾದದ ಮೂಲಕ ರಾಜ್ಯದ ಜನರನ್ನು ಒಡೆದು ಆಳುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲರ ವಿಶ್ವಾಸ ಪಡೆದು ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುತ್ತಿದೆ ಎಂದರು.

ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಜಗತ್ತಿನಲ್ಲಿ 10ನೇ ಸ್ಥಾನದಲ್ಲಿದ್ದ ಭಾರತ, ಈಗ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆಟೋಮೊಬೈಲ್, ಮೊಬೈಲ್, ಕೈಗಾರಿಕಾ ಮತ್ತಿತರ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸಿದೆ.

ನಮ್ಮನ್ನು ಆಳಿದ ಬ್ರಿಟಿಷ್ ಸರ್ಕಾರವನ್ನು ಹಿಂದಿಕ್ಕಿ ಭಾರತ ಮುನ್ನಡೆಯುತ್ತಿದೆ. ಕರ್ನಾಟಕದಲ್ಲೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದ್ದರಿಂದ ಪಿರಿಯಾಪಟ್ಟಣದಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

ಪಟ್ಟಣದ ಎಪಿಎಂಸಿ ಆವರಣದಿಂದ ಬಿ.ಎಂ.ರಸ್ತೆಯ ಮೂಲಕ ಕನ್ನಂಬಾಡಿಅಮ್ಮನವರ ದೇವಾಲಯದ ವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು.

ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಹ್ಮಣ್ಯ, ಮಾಜಿ ಶಾಸಕ ಎಚ್‌.ಸಿ.ಬಸವರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ವಕ್ತಾರ ಮಹೇಶ್, ಸಂಚಾಲಕ ಮಹದೇವಯ್ಯ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಸಹ ವಕ್ತಾರ ವಸಂತ್ ಕುಮಾರ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮಾಜಿ ಅಧ್ಯಕ್ಷ ಪಿ.ಜೆ.ರವಿ, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಸಿ.ವೀರಭಧ್ರ, ಬೆಮ್ಮತ್ತಿ ಚಂದ್ರು, ವಕೀಲ ರಾಜೇಗೌಡ, ಮುಖಂಡರಾದ ಆರ್.ಟಿ.ಸತೀಶ್, ಕೌಲನಹಳ್ಳಿ ಸೋಮಶೇಖರ್, ಡಾ.ಶಿವರಾಮ್, ರಮೇಶ್, ರವಿಕುಮಾರ್, ಲೋಕಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ