Friday, November 1, 2024
CrimeNEWSನಮ್ಮರಾಜ್ಯ

ಪಿರಿಯಾಪಟ್ಟಣ: ಕರ್ತವ್ಯ ನಿರತ ತಹಸೀಲ್ದಾರ್ ಮೇಲೆ ಹಲ್ಲೆಗೆ ಯತ್ನ ದೂರು ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರ ಮೇಲೆ ದೂರು ದಾಖಲಾಗಿರುವ ಘಟನೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ಮಂಗಳವಾರ ತಹಶೀಲ್ದಾರ್ ಕುಂಞಿ ಅಹಮದ್ ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಏಕಾಏಕಿ ಕಚೇರಿಗೆ ನುಗ್ಗಿದ ಚಾಮರಾಯನಕೋಟೆ ಜಗದೀಶ್ ಹಾಗೂ ಮುಮ್ಮಡಿ ಕಾವಲು ದೊಡ್ಡಯ್ಯ ಎಂಬುವವರ ಮೇಲೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದವರ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಇಬ್ಬರು ಮಧ್ಯಾಹ್ನ 2 ಗಂಟೆಯಲ್ಲಿ ಏಕಾಏಕಿ ತಹಸೀಲ್ದಾರ್ ಕಚೇರಿಗೆ ಧಾವಿಸಿ ಜಮೀನಿನನ್ನು ಪೋಡಿ ಮಾಡುವ ವಿಷಯ ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತನಾಡುವ ವೇಳೆ ಏಕಾಏಕಿ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಜಗದೀಶ್ ಮತ್ತು ದೊಡ್ಡಯ್ಯ ಎಂಬುವವರು ತಹಸೀಲ್ದಾರ್ ಟೇಬಲ್ ಮೇಲೆ ಇಟ್ಟಿದ್ದ ಫೈಲ್‌ಗಳನ್ನು ತೆಗೆದು ಹರಿದು ಹಾಕಿ ತಹಸೀಲ್ದಾರ್ ಕುಂಞಿ ಅಹಮದ್ ಅವರನ್ನು ಏಕವಚನದಲ್ಲಿ ಬೈಯ್ದು ಹಲ್ಲೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರು ಹಲ್ಲೆಯನ್ನು ತಡೆದಿದ್ದಾರೆ. ನಂತರ ತಹಸೀಲ್ದಾರ್ ಅವರು ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿ.ಶ್ರೀಧರ್ ಅವರಿಗೆ ದೂರವಾಣಿ ಕರೆ ಮಾಡಿ ಕಚೇರಿಯ ಬಳಿ ಬರುವಂತೆ ತಿಳಿಸಿದ್ದಾರೆ. ಆದರೆ, ಶ್ರೀಧರ್ ಅವರು ನ್ಯಾಯಾಲಯದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತುಮಕೂರಿನ ನ್ಯಾಯಾಲಯಕ್ಕೆ ಹೋಗಿದ್ದಾಗಿ ತಿಳಿಸಿದ್ದಾರೆ.

ನಂತರ ಸಬ್ ಇನ್ಸ್ಪೆಕ್ಟರ್‌ಗೆ ಕರೆ ಮಾಡಿದ್ದಾರೆ. ಅವರು ಸ್ಥಳಕ್ಕೆ ಬಾರದೆ ಇರುವಾಗ ತಹಸೀಲ್ದಾರ್ ಕುಂಞಿ ಅಹಮದ್ ಅವರು ತಾವೇ ಪೊಲೀಸ್ ಠಾಣೆಗೆ ಹೋಗಿ ಈ ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...