NEWSದೇಶ-ವಿದೇಶನಮ್ಮರಾಜ್ಯ

ರಾಜ್ಯ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳ ಮೋಕ್ಷ ಮಾಡಿದ ಪ್ರಧಾನಿ ಮೋದಿ: ಸಿಎಂ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ ಎಂದು X ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಎರಡು ರೂಪಾಯಿಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ತಿವಿದಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.

ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರ್ಕಾರದ ಜನವಿರೋಧೀ ನೀತಿ ಎನ್ನುವುದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು. ಹೀಗಿದ್ದರೂ ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಮಸಿ ಬಳಿದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಎರಡು ಆಯ್ಕೆ: ಒಂದೋ ಅವರು ಪ್ರಧಾನ ಮಂತ್ರಿಯವರ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು, ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದು ಎಚ್ಚರಿಕೆ ನೀಡಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ