ಮೈಸೂರು: ಚಾಲಕನ ನಿಯಂತ್ರ ಕಳೆದುಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿರುವ ಘಟನೆ ನಡೆದಿದೆ.
ಮೈಸೂರು ಬಳಿ ಮಂಗಳವಾರ ಈ ಅವಘಡ ಸಂಭವಿಸಿದ್ದು ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಹ್ಲಾದ್ ಮೋದಿ ಮತ್ತವರ ಕುಟುಂಬ ಬಂಡೀಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಪ್ರಹ್ಲಾದ್ ಮೋದಿ ಅವರ ಮೊಮ್ಮಗನ ಕಾಲಿನ ಮೂಳೆ ಮುರಿದಿದೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಗುವಿಗೆ ಮೂಳೆ ಮುರಿತವಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡಿರುವ ಡಾ. ಮಧು ತಿಳಿಸಿದ್ದಾರೆ.
ಕುಟುಂಬದ ಐವರು ಸದಸ್ಯರು ಬೆನ್ಜ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ನಿಧಾನವಾಗಿಯೇ ಚಲಾಯಿಸುತ್ತಿದ್ದ. ಆದರೆ, ಅವರ ನಿಯಂತ್ರಣ ಕಳೆದುಕೊಂಡು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ” ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಡ್ಕರ್ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕ್ರೀಡಾ ಸಚಿವ ನಾರಾಯಣಗೌಡ ಆಸ್ಪತ್ರೆಗೆ ಭೇಟಿ ನೀಡಿ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬದವರ ಆರೋಗ್ಯ ವಿಚಾರಿಸಿದ್ದಾರೆ.