CRIMEನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿಯಲ್ಲಿ ನಿರ್ವಾಹಕನ ಮೇಲೆ ಪುಂಡರಿಂದ ಹಲ್ಲೆ  ಪೋಕ್ಸೋ ಪ್ರಕರಣ ದಾಖಲಿಗೆ ಬೈರೇಗೌಡ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದ ನಿರ್ವಾಹಕ ಮಹದೇವ ಎಂ.ಹುಕ್ಕೇರಿ ಅವರ ಮೇಲೆ ಮಹಾರಾಷ್ಟ್ರದ ಪುಂಡರು ಅಟ್ಟಹಾಸ ಮೆರೆದಿದ್ದು ಅಲ್ಲದೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಬೈರೇಗೌಡ ಖಂಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹಲ್ಲೆಗೆ ಒಳಗಾದ ನಿರ್ವಾಹಕ ಮಹದೇವ್  ಅವರಿಗೆ ವೈದ್ಯಕೀಯ ಖರ್ಚನ್ನು ಸಂಪೂರ್ಣವಾಗಿ ಸರ್ಕಾರವೇ ಬರಿಸಬೇಕು ಎಂದು ಆಗ್ರಹಿಸಿದರು.

ಇನ್ನಿ  ಮಹದೇವ್ ಅವರಿಗೆ ಜೀವ ಭಯವಿದೆ ಅವರಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಜತೆಗೆ ರಾಜ್ಯದ ಗಡಿಭಾಗದಲ್ಲಿ ಮಹಾರಾಷ್ಟ್ರ ಪುಂಡರು ಮೆರೆಯುತ್ತಿರುವ ಅಟ್ಟಹಾಸಕ್ಕೆ ಸರ್ಕಾರ ಕೂಡಲೇ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ರಾಜ್ಯದ ಬಸ್‌ಗಳಿಗೆ ಮಸಿ ಬಳಿಯುತ್ತಿರುವುದು ಹಾಗೂ ನಮ್ಮ ಚಾಲನಾ ಸಿಬ್ಬಂದಿಗಳನ್ನು ಹಿಂಸಿಸುತ್ತಿರುವ ಕಿಡಿಗೇಡಿಗಳಿಗೆ ಪೊಲೀಸರು ತಕ್ಕ ಬುದ್ಧಿಕಲಿಸಬೇಕಿದೆ. ಕಿಡಿಗೇಡಿಗಳ ನಡೆಯಿಂದ ಇತರ ಚಾಲಕ ನಿರ್ವಾಹಕರ ಮೇಲೆ ಹಲ್ಲೆ ಆಗುತ್ತಿದೆ ಅದಕ್ಕೆ ಒಂದು ಹೊಸ ಕಾನೂನು ರಚಿಸಿ ಚಾಲಕ ನಿರ್ವಾಹಕರಿಗೆ ಅಗತ್ಯ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ಸಾರಿಗೆ ಸಚಿವರು ನಮ್ಮ ಚಾಲನಾ ಸಿಬ್ಬಂದಿಗಳ ಬಗ್ಗೆ ಕಾಳಜಿವಹಿಸಿ ಮುಂದೆ ಈ ಅಹಿತಕರ ಘಟನೆ ನಡೆಯದಾಗ ಸರ್ಕಾರ ಕೂಡಲೇ ಕ್ರಮ ಜರುಗಿಸುವಂತ ಕಾನೂನು ರೂಪಿಸಬೇಕು. ಅದಕ್ಕೆ ಸಚಿವರು ಧ್ವನಿಯಾಗಬೇಕು ಎಂದರು.

ಇನ್ನು ಮುಂದಿನ ದಿನಗಳಲ್ಲಿ ಚಾಲಕ ನಿರ್ವಾಹಕರ ಮೇಲೆ ಹಲ್ಲೆಯಾದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರ ಕ್ಷೇಮಾಭಿವೃದ್ಧಿ ಸಂಘವು ಮುಷ್ಕರ ಮಾಡಲು ಹಿಂಜರಿಯುವುದಿಲ್ಲ. ಅದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಬೈರೇಗೌಡ ಎಚ್ಚರಿಜೆ ನೀಡಿದರು.

Deva
the authorDeva

Leave a Reply

error: Content is protected !!
Latest news
KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌