Please assign a menu to the primary menu location under menu

CrimeNEWSಕೃಷಿದೇಶ-ವಿದೇಶ

ಹೋರಾಟ ನಿರತ ರೈತರ ಮೇಲೆ ಪೊಲೀಸರ ದರ್ಪ: 65 ಮಂದಿ ಅನ್ನದಾತರು ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಂಜಾಬ್ ಭಾಗದ 65 ರೈತರು ಪೊಲೀಸರ ದೌರ್ಜನ್ನಕೆ ತುತ್ತಾಗಿ ಚಿಕಿತ್ಸೆಗಾಗಿ ಪಾರ್ಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಪಂಜಾಬ್ ಭಾಗದ 65 ರೈತರು ಪೊಲೀಸರ ದೌರ್ಜನ್ನಕೆ ತುತ್ತಾಗಿದ್ದಾರೆ, ಅತ್ತ ದೆಹಲಿ ರಾಜಸ್ಥಾನ ಗಡಿಯಲ್ಲಿನ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಮಿತಿ ಮೀರಿದೆ. ಈ ಬಗ್ಗೆ ಕೂಡಲೆ ಪ್ರಧಾನಿ ಮೋದಿಯವರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಯಾವುದೇ ದಾಳಿಯನ್ನು ರೈತ ಆಂದೋಲನವು ಪ್ರತಿರೋಧಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರ ದುರ್ಬಳಕೆ ಮಾರ್ಗ ಮಾಡಿಕೊಂಡು, ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ, ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನು ಖಂಡಿಸುತೇನೆ ಎಂದು ಕಿಡಿಕಾರಿದರು.

ಇನ್ನು ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆಯಲು ಡ್ರೋನ್‌ಗಳನ್ನು ಬಳಸಿರುವುದು ಅತ್ಯಂತ ಅಘಾತಕಾರಿಯಾಗಿದೆ. ರೈತರ ಮೇಲೆ ನಡೆಸಿರುವ ಈ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು, ದೇಶದಾದ್ಯಂತ ಪ್ರತಿಭಟಿಸಲು ಮತ್ತು ಗ್ರಾಮೀಣ ಬಂದ್ ವ್ಯಾಪಕ ಮತ್ತು ಯಶಸ್ವಿಯಾಗಿ ನಡೆಸಲು ಎಲ್ಲ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಎಲ್ಲ ರೈತ ಸಂಘಟನೆಗಳು ಫೆ.16 ರಂದು ರಾಜ್ಯಾದ್ಯಂತ ಬೆಳಗ್ಗೆ 11 ರಿಂದ 1 ಗಂಟೆ ತನಕ ರಸ್ತೆ ಬಂದ್ ಚಳವಳಿ ನಡೆಸಿ, ಇದು ದೇಶದ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯತರ) ಕರೆ ನೀಡಿದೆ ಎಂದು ತಿಳಿಸಿದರು.

ರೈತರ ಶಾಂತಿಯುತ ಹೋರಾಟದ ಮೇಲೆ ದಾಳಿ ಮಾಡಲು ಪೊಲೀಸರು ಮತ್ತು ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದು ಸರ್ಕಾರ ರೈತರ ಆಂದೋಲನ ದಮನ ಮಾಡುವ ಕಾರ್ಯವಾಗಿದೆ. ಇಂತಹ ಕೆಟ್ಟ ನೀತಿಗಳಿಂದ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂಬುದನ್ನು ತೋರಿಸುತ್ತದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಪ್ರತಿಯೊಂದು ವರ್ಗದ ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅವರ ಜೀವನೋಪಾಯವನ್ನು ರಕ್ಷಿಸುವ ನಿರ್ದಿಷ್ಟ ಬೇಡಿಕೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದರು.

ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಹೋರಾಟ ನಿರತ ರೈತರನ್ನು ದೇಶದ ಶತ್ರುಗಳಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಸುವರ್ಣ ವಿಧಾನಸೌಧ: ಸಾರಿಗೆ ನೌಕರರ ವೇತನ ಪರಿಷ್ಕರಣೆ, 38 ತಿಂಗಳ ವೇತನ ಹಿಂಬಾಕಿ ಸಂಬಂಧ ಚರ್ಚೆ KSRTC: ಡಿ.31ರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಸಮಾನ ಮನಸ್ಕರ ಒಕ್ಕೂಟ ವಿರೋಧ KSRTC: ಹೊರಗುತ್ತಿಗೆ ಚಾಲಕರ ನೇಮಕಕ್ಕೆ 30-40 ಸಾವಿರ ರೂ. ಲಂಚ - ಭ್ರಷ್ಟರಿಗೆ ಕಡಿವಾಣವೇ ಇಲ್ಲ! ನಮ್ಮ ಸರ್ಕಾರ ಒಳ ಮೀಸಲಾತಿ ಅನುಷ್ಠಾನ ಮಾಡಿಯೇ ತೀರುತ್ತದೆ: ಮುನಿಯಪ್ಪ ಭರವಸೆ ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ, ಗುಣಮಟ್ಟ ಕಾಪಾಡಿ: ಡಿಸಿ ಡಾ. ಶಿವಶಂಕರ್ ಸಾರಿಗೆ ನೌಕರರ ಉದ್ಧಾರಕ್ಕಲ್ಲ ಇವರ ಸಂಘಗಳ ಅಸ್ತಿತ್ವ ಉಳಿಸಿಕೊಳ್ಳೋಕೆ ಅಷ್ಟೇ ಈ ಹೋರಾಟ : ಕೂಟದ ಅಧ್ಯಕ್ಷ ಚಂದ್ರಶೇಖರ್‌ ಯಾವಾಗ ಸ್ವಾಮಿ ತಾವು ಸರಿ ಸಮಾನ ವೇತನ ಕೊಡಿಸುವುದು 2024ರ ಅಗ್ರಿಮೆಂಟ್‌ ಆದ ಮೇಲಾ: ಒಕ್ಕೂಟಕ್ಕೆ ಸಾರಿಗೆ ನೌಕರರ ಪ್ರಶ್ನ... KSRTC: ಸರಿ ಸಮಾನ ವೇತನಕ್ಕಾಗಿ ದೃಢ ನಿರ್ಧಾರ ತೆಗೆದುಕೊಳ್ಳಿ ಇಲ್ಲ ಡಿ.31ರ ಮುಷ್ಕರ ಬೆಂಬಲಿಸಿ- ಒಕ್ಕೂಟಕ್ಕೆ ಮಲ್ಲೇಶ್‌... ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ