CrimeNEWSಕೃಷಿದೇಶ-ವಿದೇಶ

ಹೋರಾಟ ನಿರತ ರೈತರ ಮೇಲೆ ಪೊಲೀಸರ ದರ್ಪ: 65 ಮಂದಿ ಅನ್ನದಾತರು ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಂಜಾಬ್ ಭಾಗದ 65 ರೈತರು ಪೊಲೀಸರ ದೌರ್ಜನ್ನಕೆ ತುತ್ತಾಗಿ ಚಿಕಿತ್ಸೆಗಾಗಿ ಪಾರ್ಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಪಂಜಾಬ್ ಭಾಗದ 65 ರೈತರು ಪೊಲೀಸರ ದೌರ್ಜನ್ನಕೆ ತುತ್ತಾಗಿದ್ದಾರೆ, ಅತ್ತ ದೆಹಲಿ ರಾಜಸ್ಥಾನ ಗಡಿಯಲ್ಲಿನ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಮಿತಿ ಮೀರಿದೆ. ಈ ಬಗ್ಗೆ ಕೂಡಲೆ ಪ್ರಧಾನಿ ಮೋದಿಯವರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಯಾವುದೇ ದಾಳಿಯನ್ನು ರೈತ ಆಂದೋಲನವು ಪ್ರತಿರೋಧಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರ ದುರ್ಬಳಕೆ ಮಾರ್ಗ ಮಾಡಿಕೊಂಡು, ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ, ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನು ಖಂಡಿಸುತೇನೆ ಎಂದು ಕಿಡಿಕಾರಿದರು.

ಇನ್ನು ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆಯಲು ಡ್ರೋನ್‌ಗಳನ್ನು ಬಳಸಿರುವುದು ಅತ್ಯಂತ ಅಘಾತಕಾರಿಯಾಗಿದೆ. ರೈತರ ಮೇಲೆ ನಡೆಸಿರುವ ಈ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು, ದೇಶದಾದ್ಯಂತ ಪ್ರತಿಭಟಿಸಲು ಮತ್ತು ಗ್ರಾಮೀಣ ಬಂದ್ ವ್ಯಾಪಕ ಮತ್ತು ಯಶಸ್ವಿಯಾಗಿ ನಡೆಸಲು ಎಲ್ಲ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಎಲ್ಲ ರೈತ ಸಂಘಟನೆಗಳು ಫೆ.16 ರಂದು ರಾಜ್ಯಾದ್ಯಂತ ಬೆಳಗ್ಗೆ 11 ರಿಂದ 1 ಗಂಟೆ ತನಕ ರಸ್ತೆ ಬಂದ್ ಚಳವಳಿ ನಡೆಸಿ, ಇದು ದೇಶದ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯತರ) ಕರೆ ನೀಡಿದೆ ಎಂದು ತಿಳಿಸಿದರು.

ರೈತರ ಶಾಂತಿಯುತ ಹೋರಾಟದ ಮೇಲೆ ದಾಳಿ ಮಾಡಲು ಪೊಲೀಸರು ಮತ್ತು ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದು ಸರ್ಕಾರ ರೈತರ ಆಂದೋಲನ ದಮನ ಮಾಡುವ ಕಾರ್ಯವಾಗಿದೆ. ಇಂತಹ ಕೆಟ್ಟ ನೀತಿಗಳಿಂದ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂಬುದನ್ನು ತೋರಿಸುತ್ತದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಪ್ರತಿಯೊಂದು ವರ್ಗದ ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅವರ ಜೀವನೋಪಾಯವನ್ನು ರಕ್ಷಿಸುವ ನಿರ್ದಿಷ್ಟ ಬೇಡಿಕೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದರು.

ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಹೋರಾಟ ನಿರತ ರೈತರನ್ನು ದೇಶದ ಶತ್ರುಗಳಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ