ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸಹಕಾರ ಸಂಘಗಳ ಚುನಾವಣೆಗಳನ್ನು ಮುಂದೂಡಿದ್ದು, ಮುಂದಿನ ಆದೇಶದವರೆಗೂ ಹಾಲಿ ಇರುವ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳನ್ನೇ ಮುಂದುವರಿಯುವಂತೆ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎ.ಸಿ.ದಿವಾಕರ್ ಆದೇಶ ಹೊರಡಿಸಿದ್ದಾರೆ.
ಕಳೆದ ಮಾರ್ಚ್ 13ರಂದೆ ಈ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ಸೊಸೈಟಿ ಚುನಾವಣೆ ಕೂಡ ಮುಂದೂಡಲ್ಪಟ್ಟಿದೆ.
2024ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆ ಇರುವುದರಿಂದ ಮಾರ್ಚ್‌ನಿಂದ ಜೂನ್‌ವರೆಗೆ ನಡೆಯಬೇಕಿರುವ ಸುಮಾರು 45 ಸಾವಿರ ಸಹಕಾರ ಸಂಘಗಳು/ ಬ್ಯಾಂಕ್‌ಗಳ ಪದಾಧಿಕಾರಿಗಳ ಚುನಾವಣೆಯನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ.