NEWSಉದ್ಯೋಗನಮ್ಮರಾಜ್ಯ

ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆ ಮುಂದೂಡಿಕೆ ಸ್ವಾಗತಾರ್ಹ: ಸಚಿವ ಪ್ರಿಯಾಂಕ್ ಖರ್ಗೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನವೆಂಬರ್‌ 5 ರಂದು ನಡೆಯಬೇಕಾಗಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆಯನ್ನು ನವೆಂಬರ್‌ 19ಕ್ಕೆ ಮುಂದೂಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೇ ನೀಡಿದರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನ.5 ರಂದು ಪೊಲೀಸ್ ಇಲಾಖೆ ನಡೆಸಲು ಉದ್ದೇಶಿಸಿದ್ದ ಕಾನ್‌ಸ್ಟೇಬಲ್‌ ಪರೀಕ್ಷೆಯನ್ನು ಮುಂದೂಡಿದ್ದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ರಾಜ್ಯ ಲೋಕಸೇವಾ ಆಯೋಗವು ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರ ಹುದ್ದೆಗಳಿಗೆ ಹಾಗೂ ರಾಜ್ಯ ಪೊಲೀಸ್‌ ಇಲಾಖೆಯು ಖಾಲಿ ಇರುವ ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ನೇಮಕಾತಿ ನಡೆಸಲು ಲಿಖಿತ ಪರೀಕ್ಷೆಯನ್ನು ನ. 5ರಂದು ನಿಗದಿಪಡಿಸಿತ್ತು.

ಒಂದೇ ದಿನ ಮೂರು ಪರೀಕ್ಷೆಗಳನ್ನು ನಡೆಸುವುದರಿಂದ ಸಾವಿರಾರು ಅರ್ಹ ಅಭ್ಯರ್ಥಿಗಳಿಗೆ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಹೆಚ್ಚಿನ ಅನಾನುಕೂಲವಾಗುತ್ತಿತ್ತು. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪರೀಕ್ಷೆ ದಿನಾಂಕವನ್ನು ಬದಲಾಯಿಸುವಂತೆ ಸಚಿವರು ಮನವಿ ಮಾಡಿದ್ದರು.

ಜತೆಗೆ IPS ಹಾಗೂ ನೇಮಕಾತಿ ಸಮನ್ವಯ ಅಧಿಕಾರಿಗಳಾದ ಯಡಾ ಮಾರ್ಟನ್ ಮಾರ್ಬನ್ಯಾಂಗ್ ಹಾಗೂ ಡಿಜಿಪಿ ಕಮಲ್ ಪಂತ್ ಅವರನ್ನು ಕಚೇರಿಗೆ ಕರೆದು ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದರು. ಇದರಿಂದಾಗಿ ರಾಜ್ಯ ಪೊಲೀಸ್ ಇಲಾಖೆಯು ತನ್ನ ಕಾನ್‌ಸ್ಟೇಬಲ್‌ ಪರೀಕ್ಷೆಯ ದಿನಾಂಕವನ್ನು 19 ನವೆಂಬರ್ 2023 ಮುಂದೂಡಿ ಆದೇಶ ಹೊರಡಿಸಿದೆ.

ನಮ್ಮ ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಅನ್ಯಾಯವಾಗದಂತೆ ಪರೀಕ್ಷೆ ಬರೆಯಲು ಅವಕಾಶ ನೀಡಿದ ಗೃಹ ಇಲಾಖೆಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಯುವ ಜನತೆ ಮುಂದಾಗಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!