NEWSನಮ್ಮರಾಜ್ಯರಾಜಕೀಯ

ಒಂದು ದಿನದ ಮಟ್ಟಿಗೆ ವಿಧಾನಪರಿಷತ್ ಕಲಾಪ ಮುಂದೂಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಕುರಿತು ವಿಧಾನಪರಿಷತ್ ನಲ್ಲಿ ಚರ್ಚೆ ನಡೆಸಬಾರದು ಎಂದು ವಿಪಕ್ಷ ಕಾಂಗ್ರೆಸ್ ಧರಣಿ ಆರಂಭಿಸಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.

ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸದೆ ವಿಷಯವನ್ನು ಚರ್ಚೆಗೆ ತರಲಾಗಿದೆ. ಚುನಾವಣಾ ಪದ್ಧತಿಯ ಬದಲಾವಣೆ ಆಗಬೇಕಾದರೆ, ಸಂವಿಧಾನದ ತಿದ್ದುಪಡಿ ಅಗತ್ಯ. ಅಂತಹ ಅಧಿಕಾರ ವಿಧಾನಪರಿಷತ್ತಿಗೆ ಇಲ್ಲ. ಆದ್ದರಿಂದ ಚರ್ಚೆಗೆ ಅವಕಾಶ ನೀಡಬಾರದು ಎಂದು ವಿಪಕ್ಷ ನಾಯಕ ಎಸ್ಆರ್ ಪಾಟೀಲ್ ಆಗ್ರಹಿಸಿದರು.

ಇದು ಆರ್‌ಎಸ್ಎಸ್ ಕಾರ್ಯಸೂಚಿ. ಇದು ಒಂದು ಪಕ್ಷ ಸಂಘಟನೆಯ ಕಾರ್ಯಸೂಚಿ. ಹೀಗಾಗಿ ಈ ಕುರಿತು ಸದನದಲ್ಲಿ ಚರ್ಚೆ ನಡೆಸಬಾರದು ಎಂದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು. ಕಾಂಗ್ರೆಸ್ನ ಪ್ರಕಾಶ್ ರಾಥೋಡ್ , ವಿಪಕ್ಷ ಮುಖ್ಯ ಸಚೇತಕ ನಾರಾಯಣಸ್ವಾಮಿ, ಜೆಡಿಎಸ್ನ ಎಚ್.ಎಂ. ರಮೇಶ್ ಗೌಡ ಸೇರಿದಂತೆ ಹಲವರು ಚರ್ಚೆಗೆ ಅವಕಾಶ ನೀಡುವುದನ್ನು ವಿರೋಧಿಸಿದರು.

ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಆದರೆ ಅದಕ್ಕೆ ಒಪ್ಪದೆ ಸಭಾಪತಿಯವರ ಪೀಠದ ಎದುರು ಧರಣಿ ಆರಂಭಿಸಿದರು. ಅಲ್ಪಕಾಲ ಕಲಾಪ ಮುಂದೂಡಿದ ಸಭಾಪತಿ, ಬಳಿಕ ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿಪಕ್ಷದ ಪ್ರಮುಖ ನಾಯಕರ ಸಭೆ ನಡೆಸಿದರು.

ಮತ್ತೆ ಕಲಾಪ ಆರಂಭವಾದಾಗ ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದರು. ಹಿಂಪಡೆಯುವಂತೆ ಸಭಾಪತಿ ಮನವಿ ಮಾಡಿದರು. ಆದರೂ ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದರು ಹೀಗಾಗಿ ಸಭಾಪತಿ ಕಲಾಪವನ್ನು ಶುಕ್ರವಾರಕ್ಕೆ ಕಲಾಪವನ್ನು ಮುಂದೂಡಬೇಕಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...