Vijayapatha – ವಿಜಯಪಥ
Friday, November 1, 2024
NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಕೋಳಿ ಸಾಕಾಣಿಕ ಕೃಷಿ ಚಟುವಟಿಕೆ ವ್ಯಾಪ್ತಿಗೆ ಬರುತ್ತದೆ- ತೆರಿಗೆ ವಿಧಿಸಬಾರದು: ಹೈಕೋರ್ಟ್‌ ಮಹತ್ವದ ತೀರ್ಪು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋಳಿ ಸಾಕಾಣಿಕೆ (ಪೌಲ್ಟ್ರಿ ಫಾರಂ) ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್​ ಕಾಯಿದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತನ್ನ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯಿತಿ​ ಕ್ರಮ ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಕೆ.ನರಸಿಂಹಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದಕ್ಕಾಗಿ ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇ. ಭಾಸ್ಕರ್ ರಾವ್​ ಪ್ರಕರಣವನ್ನು ಹೈಕೋರ್ಟ್ ಉಲ್ಲೇಖಿಸಿದೆ.

ಕೋಳಿ ಸಾಕಾಣಿಕೆ ಕೇಂದ್ರಕ್ಕಾಗಿ ನಿರ್ಮಾಣ ಮಾಡುವ ಕಟ್ಟಡವನ್ನು ಕರ್ನಾಟಕ ಗ್ರಾಮ ಸ್ವರಾಜ್​ ಕಾಯಿದೆ ಷೆಡ್ಯೂಲ್‌​ 4 ರ (ಎ)(2) ಅಡಿಯಲ್ಲಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ ಹಾಗೂ ಕೋಳಿ ಸಾಕಾಣಿಕೆ ಕೇಂದ್ರ ಇರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರಿಯಲಿದ್ದು, ಅದನ್ನು ವಾಣಿಜ್ಯ ಭೂಮಿಯನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ ಅರ್ಜಿದಾರರಿಂದ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರೂಪಾಯಿಗಳನ್ನು ಹಿಂದಿರುಗಿಸಬೇಕು ಎಂದು ನಿರ್ದೇಶನ ನೀಡಿದೆ. ಜತೆಗೆ ಗ್ರಾಮ ಪಂಚಾಯಿತಿ​ ಜಾರಿ ಮಾಡಿದ್ದ ನೋಟಿಸ್​ ಅನ್ನು ರದ್ದುಪಡಿಸಿ ಆದೇಶಿಸಿದೆ.

ಪ್ರಕರಣ: ಅರ್ಜಿದಾರರ ಕೆ.ನರಸಿಂಹಮೂರ್ತಿ ಅವರು ಸೊಂಡೆಕೊಪ್ಪ ಗ್ರಾಮ ಪಂಚಾಯಿತಿ​ ವ್ಯಾಪ್ತಿಯ ನಾಗಸಂದ್ರ ಎಂಬ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದು, ಈ ಭಾಗದಲ್ಲಿ ಕೋಳಿ ಸಾಕಾಣಿಕೆ ಮಾಡುವ ಸಲುವಾಗಿ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ವಿದ್ಯುತ್​ ಸಂಪರ್ಕ ಪಡೆಯುವುದಕ್ಕಾಗಿ ನಿರಾಕ್ಷೇಪಣಾ ಪತ್ರಕ್ಕಾಗಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು.

ಮನವಿ ಪರಿಗಣಿಸಿದ್ದ ಪಂಚಾಯಿತಿ ಅಧಿಕಾರಿಯು ಕೋಳಿ ಸಾಕಾಣಿಕೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ನಿರಾಕ್ಷೇಪಣಾ ಪತ್ರ ವಿತರಣೆ ಮಾಡುವುದಕ್ಕಾಗಿ 1.3 ಲಕ್ಷ ರೂಪಾಯಿ ಪಾವತಿ ಮಾಡಬೇಕು ಎಂದು ಸೂಚನೆ ನೀಡಿ ನೋಟಿಸ್​ ನೀಡಿದ್ದರು. ಇದರಿಂದ ಅರ್ಜಿದಾರ 59,551 ಪಾವತಿ ಮಾಡಿದ್ದರು.

ಆನಂತರ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆಗಳಾಗಿದ್ದು, ಇದಕ್ಕಾಗಿ ನಿರಾಕ್ಷೇಪಣಾ ಪತ್ರ ಪಡೆಯುವುದು ಹಾಗೂ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ. ಈ ರೀತಿ ತೆರಿಗೆ ವಿಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಅಂಶ ಮನಗಂಡು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ