NEWSಕೃಷಿನಮ್ಮರಾಜ್ಯ

ಪೌತಿಖಾತೆ ಆಂದೋಲನ: ಆಸ್ತಿ ಖಾತೆಗಳ ವಿತರಣೆಯಲ್ಲಿ ಮಹತ್ವದ ಸುಧಾರಣೆ ತಂದಿದೆ -ಸಚಿವ ಆರ್.ಅಶೋಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಮಾತನಾಡಿದರು,

ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ, ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ.

ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ, ಯಾವುದೇ ಅನಗತ್ಯ ತಂಟೆ, ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರೂ ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.

ಪೌತಿಖಾತೆಗೆ ಅರ್ಜಿ ಸಲ್ಲಿಸಿದ್ದ 17 ಕುಟುಂಬಗಳಿಗೆ ಸಚಿವರು ಆಸ್ತಿಖಾತೆ ದಾಖಲೆಗಳನ್ನು ವಿತರಿಸಿದರು. ಪೌತಿಖಾತೆಗೆ ಅರ್ಜಿ ಸಲ್ಲಿಸಿ ನೋಟಿಸ್ ಅವಧಿಯಲ್ಲಿರುವ 98 ಜನರಿಗೂ ವಿಳಂಬ ಮಾಡದೇ ಖಾತೆ ಪತ್ರಗಳನ್ನು ವಿತರಿಸಿದರು. ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಸಚಿವ ಎನ್‌.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ತಹಸೀಲ್ದಾರ್‌ ಮಹೇಶಕುಮಾರ್ ಮತ್ತಿತರರು ಇದ್ದರು‌.

ಮುಚ್ಚು ಹರಾಜು ಕಟ್ಟೆ ಉದ್ಘಾಟನೆ: ಹೊಸಕೋಟೆ ಎಪಿಎಂಸಿಯು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಜಮೀನಿನಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಲು ನಿರ್ಮಿಸಿರುವ ನೂತನ ಕಾಂಕ್ರೀಟ್ ಮುಚ್ಚು ಹರಾಜು ಕಟ್ಟೆಯನ್ನು ಸಚಿವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ