
ನೇಪಿಟಾವ್: ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡ ಕುಸಿದು ಬಿದ್ದಿದ್ದ ಪರಿಣಾಮ 60 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇನ್ನು ನಿರ್ಮಾಣ ಹಂತದ ಕಟ್ಟದಲ್ಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಅಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ಭೂಕಂಪ ಮತ್ತೆ ಸಂಭವಿಸಿದೆ.
ಥೈಲ್ಯಾಂಡ್ ರಾಜಧಾನಿಯಲ್ಲಿ, ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡ ಕುಸಿದು 43 ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಮತ್ತು ವೈದ್ಯರು ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಉದ್ದೇಶಿಸಲಾದ ಬೃಹತ್ ಕಟ್ಟಡವು ಸೆಕೆಂಡುಗಳಲ್ಲಿ ಅವಶೇಷಗಳು ಮತ್ತು ಕಬ್ಬಿಣದ ಭಾರಿ ಗಾತ್ರದ ಸರಳು ನೆಲಕಚ್ಚುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಭೂಕಂಪದ ಕೇಂದ್ರಬಿಂದುವು ಮಧ್ಯ ಮ್ಯಾನ್ಮಾರ್‌ನಲ್ಲಿದ್ದು, ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಇದೆ ಎಂದು ವರದಿಯಾಗಿದೆ. ಥೈಲ್ಯಾಂಡ್‌ನಲ್ಲಿಯೂ ನಾಲ್ಕು ಸಾವುಗಳು ವರದಿಯಾಗಿವೆ. 81 ಜನರು ಕಾಣೆಯಾಗಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮ್ಯಾನ್ಮಾರ್‌ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದು, ಒಂದು ಮಸೀದಿ ಭಾಗಶಃ ಕುಸಿದು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದೆ. ಥೈಲ್ಯಾಂಡ್‌ನ ಹಲವಾರು ಭಾಗಗಳಲ್ಲಿಯೂ ಭೂಕಂಪದ ಅನುಭವವಾಗಿದೆ.
ಈ ಭೂಕಂಪದ ನಂತರ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡ ಕುಸಿದು ಕನಿಷ್ಠ ಮೂವರು ಮೃತಪಟ್ಟಿದ್ದು, ಹತ್ತಾರು ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಭೂಕಂಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಹೇಳಿದ್ದಾರೆ.