CrimeNEWSನಮ್ಮರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವುದು ಅತ್ಯಂತ ಪಾಪ ಕೃತ್ಯ ಎಂದು ಹೈಕೋರ್ಟ್ ತಿಳಿಸಿದೆ. ಅಲ್ಲದೆ, ಈ ರೀತಿಯ ಪಾಪಕೃತ್ಯದಿಂದ ಸಂತ್ರಸ್ತೆಯರನ್ನ ಅವಮಾನಕ್ಕೆ ಗುರಿ ಮಾಡಿಸಲಾಗಿದೆ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬೆಂಗಳೂರಿ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ನಂತರದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ, ಈ ಅರ್ಜಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾರದೆ ನಾಪತ್ತೆಯಾಗಿತ್ತು. ಅದಕ್ಕಾಗಿ ಈ ಅರ್ಜಿ ಪಟ್ಟಿ ಮಾಡುವಂತೆ ಸೂಚಿಸಲಾಗಿತ್ತು. ಅರ್ಜಿದಾರರನ್ನು ಬಂಧಿಸಬಾರದು ಎಂದು ಆದೇಶಿಸಲಾಗಿತ್ತು. ಆದರೆ, ಅರ್ಜಿದಾರರು ಜಾಮೀನು ಪಡೆದಿಲ್ಲ ಎಂದು ಪೀಠ ತಿಳಿಸಿತು.

ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅರ್ಜಿದಾರರ ಪರ ವಕೀಲರು, ಪ್ರೀತಮ್ ಗೌಡ ಅವರನ್ನು ನಾನು ಪ್ರತಿನಿಧಿಸುತ್ತಿದ್ದೇನೆ. ವಾದ ಮಂಡಿಸಲು ನಾನು ಸಿದ್ಧನಿದ್ದೇನೆ. ವಿಶೇಷ ತನಿಖಾ ದಳವು ತನಿಖೆ ಮುಂದುವರಿಸಬಹುದು. ಅದಕ್ಕೆ ನಮ್ಮ ಆಕ್ಷೇಪವಿಲ್ಲ ಎಂದು ಪೀಠಕ್ಕೆ ವಿವರಿಸಿದರು.

ಅದಕ್ಕೆ ಪೀಠವು ಅರ್ಜಿದಾರರು ವಿಚಾರಣೆಗೆ ಸಹಕರಿಸುತ್ತಿಲ್ಲವೇ ಎಂದು ಪ್ರಶ್ನಿಸಿತು. ಈ ವೇಳೆ ವಕೀಲರು, ಎಸ್‌ಐಟಿ ನಮ್ಮನ್ನು ವಿಚಾರಣೆಗೆ ಕರೆದಿಲ್ಲ ಎಂದು ತಿಳಿಸಿದರು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದೆ. ಈ ಪ್ರಕರಣ ರದ್ದು ಮಾಡುವಂತೆ ಕೋರಿ ಪ್ರೀತಮ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್​ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ