CrimeNEWSನಮ್ಮಜಿಲ್ಲೆ

ಗಣಿ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ಬಂಧನ- ಮಾಜಿ ಕಾರು ಚಾಲಕನಿಂದ ಕೃತ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ತೆಗೆದಹಾಕಿದ್ದ ಕಾರು ಚಾಲಕನನ್ನು ಬಂಧಿಸಲಾಗಿದೆ.

ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್‌ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕಳೆದ 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದ. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದ. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದ.

ಇನ್ನು ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಗೋಗರೆದು ಬೇಡಿಕೊಂಡಿದ್ದ. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದದ್ದಾನೆ.

ಇತ್ತ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಪರಾರಿಯಾಗಿದ್ದ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ನ್ಯಾಯಾಧೀಶರ ಮುಂದೆ ಮುಂದೆ ಹಾಜರುಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!