ಮೈಸೂರು: ಎರಡು ದಿನಗಳ ಮೈಸೂರು ಭೇಟಿಗಾಗಿ ಸೋಮವಾರ (ಸೆ.1) ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಬಳಿಕ ವಿಮಾನ ನಿಲ್ದಾಣದಿಂದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಇನ್ನೂ ಸಮಾರಂಭದ ಬಳಿಕ ರಾಷ್ಟ್ರಪತಿ ಮುರ್ಮು ಅವರು ರ‍್ಯಾಡಿಸನ್ ಬ್ಲೂ ಹೊಟೇಲ್‌ಗೆ ತೆರಳಿದರು. ರಾತ್ರಿ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ.
Related

Deva
 










