NEWSದೇಶ-ವಿದೇಶನಮ್ಮಜಿಲ್ಲೆಮೈಸೂರು

ಇಂದು-ನಾಳೆ ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರವಾಸ: ಚಾಮುಂಡಿ ಬೆಟ್ಟಕ್ಕೂ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದು ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಸ್ಥಳಗಳಿಗೆ ಪ್ರವಾಸ ಮಾಡಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮುಖವಾಗಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ (ಇಂದು) ಮೈಸೂರಿನ ಆಯುಷ್ (ಎಐಐಎಸ್‌ಎಚ್)ನಲ್ಲಿ ಯಾವುದೇ ಚಿಕಿತ್ಸೆಗಳು ಲಭ್ಯ ಇರುವುದಿಲ್ಲ. ಜತೆಗೆ ಸಾರ್ವಜನಿಕರ ಪ್ರವೇಶಕ್ಕೂ ನಿರ್ಬಂಧವಿದೆ.

ಇಂದು ಸಂಜೆ ವೇಳೆಗೆ ಚಾಮುಂಡಿ ಬೆಟ್ಟಕ್ಕೆ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ವೇಳೆ ಬೆಟ್ಟದತಾಯಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಎಂಟು ಗಂಟೆವರೆಗೂ ಚಾಮುಂಡಿ ಬೆಟ್ಟಕ್ಕೂ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ.

ಇನ್ನು ಸೆಪ್ಟೆಂಬರ್ 2ರಂದು ಅಂದರೆ ನಾಳೆ ರಾಷ್ಟ್ರಪತಿಗಳು ಐತಿಹಾಸಿಕವಾದ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಭದ್ರತಾ ದೃಷ್ಟಿಯಿಂದ ಹಾಗೂ ಶಿಷ್ಟಾಚಾರ ಪಾಲನೆಗಾಗಿ ನಾಳೆ ಪ್ರವಾಸಿಗರಿಗೆ ಅರಮನೆಯ ಪ್ರವೇಶ, ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇಂದಿನಿಂದ ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಧ್ವನಿ, ಬೆಳಕು ಕಾರ್ಯಕ್ರಮವನ್ನೂ ಕೂಡ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ